ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಆಡಳಿತ-ಎಸ್.ಕೇಶವಮೂರ್ತಿ

 *ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಆಡಳಿತ-ಎಸ್.ಕೇಶವಮೂರ್ತಿ*






 ವಾರ್ಡ್ ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎಸ್.ಕೇಶವಮೂರ್ತಿರವರು ಹುಟ್ಟುಹಬ್ಬದ ಅಚರಣೆಯನ್ನು ಅಭಿಮಾನಿಗಳು,ಸ್ನೇಹಿತರು ಅಚರಿಸಿದರು*.

ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಎಸ್.ಕೇಶವಮೂರ್ತಿರವರು, ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾದ ಶ್ರೀಮತಿ ಚೇತನಾ ಕೇಶವಮೂರ್ತಿರವರು ಅಭಿಮಾನಿಗಳ ತಂದ ಕೇಕ್ ಕತ್ತರಿಸಿ,ಎಲ್ಲರಿಗೂ ಸಿಹಿ ವಿತರಿಸಿದರು.

ಇದೇ ಸಂದರ್ಭದಲ್ಲಿ ಎಸ್.ಕೇಶವಮೂರ್ತಿರವರು ಮಾತನಾಡಿ ಕಾಂಗ್ರೆಸ್ ಪಕ್ಷ ನನ್ನ ಗುರುತಿಸಿ ಎರಡು ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು.

ಮಹಾಲಕ್ಷ್ಮೀಪುರಂ ವಾರ್ಡ್ ನಾಗರಿಕರ ಆಶೀರ್ವಾದದ ಫಲದಿಂದ ಎರಡು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ ಆಯ್ಕೆಯಾದೆ.

ಕಾಂಗ್ರೆಸ್ ಪಕ್ಷ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದದಿಂದ ಆಡಳಿತಕ್ಕೆ ಬರಲಿದೆ.

ಕಾಂಗ್ರೆಸ್ ಪಕ್ಷ ಜನಪರ ಆಡಳಿತ, ಜನಮೆಚ್ಚಿದ ಆಡಳಿತ ನೀಡಿ ರಾಜ್ಯದ ಮನೆ ಮಾತಾಗಿದ್ದಾರೆ.

ನನ್ನ ರಾಜಕೀಯ ಜೀವನಕ್ಕೆ ಸಹಕಾರ ,ಬೆಂಬಲ ನೀಡಿದ ಮಹಾಲಕ್ಷ್ಮೀಪುರಂ ವಾರ್ಡ್ ಸಮಸ್ತ ನಾಗರಿಕರಿಗೆ ಹೃತ್ವೂರ್ವಕ ಧನ್ಯವಾದಗಳು ಎಂದು ಹೇಳಿದರು.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims