Bangalore:ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಶಾಲೆಗಳಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ…!

 

Bangalore:ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಶಾಲೆಗಳಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ…












ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಶಾಲೆಗಳಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗಾಗಿ ಕೈಗೊಂಡಿರುವ ಸಿದ್ಧತೆ ಕುರಿತು ಶಿಕ್ಷಣ ಸಚಿವರಿಂದ ವಿಡಿಯೊ ಕಾನ್ಫರೆನ್ಸ್

ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆಯಲು ಕರೆ ನೀಡಿದ ಸಚಿವರು

ಬೆಂಗಳೂರು: ಜನವರಿ 17, 2023: ಮಕ್ಕಳು ಪರೀಕ್ಷೆಯ ಒತ್ತಡದಿಂದ ಹೊರ ಬಂದು ಆಸಕ್ತಿಯಿಂದ, ಖುಷಿಯಿಂದ ಪರೀಕ್ಷೆ ಬರೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಡೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಮಂಗಳವಾರ (ಜ.17) ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರು.

20230117 155847

ಜನವರಿ 27ರಂದು ದಿಲ್ಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಕ್ಕಳು ಪಾಲ್ಗೊಂಡು ಪ್ರಧಾನಿಯವರೊಂದಿಗೆ ಪರೀಕ್ಷೆಯ ಕುರಿತು ಚರ್ಚೆ ನಡೆಸಲಿದ್ದಾರೆ.

ಆನ್‌ಲೈನ್ ಮೂಲಕ, ಪತ್ರಗಳ ಮೂಲಕ
ಮಕ್ಕಳು, ಪಾಲಕರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿಯವರು ಉತ್ತರ ನೀಡುತ್ತಾರೆ. ಮಕ್ಕಳು ಧೈರ್ಯದಿಂದ, ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಬರೆಯಲು ನೀಡುವ ಸಲಹೆ, ಸೂಚನೆಗಳು ಮಕ್ಕಳಿಗೆ ಉಪಯುಕ್ತವಾಗಲಿವೆ. ಪರೀಕ್ಷೆಯ ಕುರಿತಾಗಿ ಇರುವ ಪ್ರಶ್ನೆಗಳು, ಸಂಶಯಗಳನ್ನು ಕೇಳಲು https://www.mygov.in/ppc-2023/ ವೆಬ್‌ಸೈಟಿಗೆ ಭೇಟಿ ನೀಡಬಹುದಾಗಿದೆ. ಆಯ್ದ ಪ್ರಶ್ನೆಗಳಿಗೆ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಉತ್ತರ ನೀಡಲಿದ್ದಾರೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪ್ರಯೋಜನ ಪಡೆಯಲು ಶಾಲೆಗಳಲ್ಲಿ ಸ್ಕ್ರೀನ್ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದಲ್ಲಿ ಮಕ್ಕಳ ಪಾಲಕರು ಕೂಡ ಪಾಲ್ಗೊಳ್ಳಲು ಕೋರಬೇಕು ಎಂದು ಸಚಿವರು ಹೇಳಿದರು.

‘ಪರೀಕ್ಷೆಯ ಕುರಿತು ಮಕ್ಕಳು ಮಾತ್ರವಲ್ಲದೇ, ಪಾಲಕರು, ಶಿಕ್ಷಕರು ಕೂಡ ಆತಂಕಕ್ಕೆ ಒಳಗಾಗುತ್ತಾರೆ. ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಆತಂಕ ಹೆಚ್ಚಾಗುತ್ತಲೇ ಹೋಗುತ್ತದೆ. ಹೀಗಾಗಿ, ಚೆನ್ನಾಗಿ ಓದಿಕೊಂಡಿರುವ ಮಕ್ಕಳು ಕೂಡ ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯಲು ವಿಫಲರಾಗುತ್ತಾರೆ. ಪಾಲಕರು ಕೂಡ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುವ ಕಾರಣ ಆತಂಕ, ಒತ್ತಡಕ್ಕೆ ಒಳಗಾಗುತ್ತಾರೆ. ಇಂತಹ ಸಮಸ್ಯೆಗಳಿಂದ ಹೊರ ಬಂದು ಮಕ್ಕಳು ಖುಷಿಯಿಂದ ಪರೀಕ್ಷೆ ಬರೆಯುವುದು ಹೇಗೆ ಎಂಬ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಲಹೆ, ಸೂಚನೆಗಳನ್ನು ನೀಡಲಿದ್ದಾರೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಆರ್. ವಿಶಾಲ್ ಹಾಗೂ ಸಮಗ್ರ ಕರ್ನಾಟಕ ಯೋಜನಾ ನಿರ್ದೇಶಕರಾದ ಕಾವೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims