ವೈಕುಂಠ ಏಕಾದಶಿ: ಹರಿದು ಬಂದ ಭಕ್ತ ಸಾಗರ*
*ವೈಕುಂಠ ಏಕಾದಶಿ: ಹರಿದು ಬಂದ ಭಕ್ತ ಸಾಗರ
*ಲಾಡು ಪ್ರಸಾದ ವಿತರಣೆ*
ವೈಕುಂಠ ಏಕಾದಶಿ ಹಿಂದೂ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನ.
ವೈಕುಂಠ ಏಕಾದಶಿ
ವಿಶೇಷವಾದದ್ದು ಈ ದಿನದಂದು (ವಿಷ್ಣುಲೋಕ, ಸ್ವರ್ಗದ) ಬಾಗಿಲು ತೆರೆದಿರುವ ದಿನ ಎಂಬ ಪ್ರತೀತಿ ಇರುವುದರಿಂದ ಅಂದು ವಿಷ್ಣು,ವೆಂಕಟೇಶ್ವರ ದೇವಾಲಯ ದರ್ಶನ ಅತ್ಯಂತ ಮಹತ್ವ ಪಡೆದುಕೊಂಡಿದೆ. ಈ ದಿನ ವಿಷ್ಣು ದೇವಾಲಯಗಳಲ್ಲಿ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.
ಯಾವುದೇ ಒಳ್ಳೆಯ, ಧಾರ್ಮಿಕ ಕೆಲಸಗಳನ್ನು ಮಾಡಬೇಕಿದ್ದರೂ ಅದಕ್ಕೆ ದೇಹ ಸದೃಢವಾಗಿರುವುದು ಅತ್ಯಗತ್ಯ.
ಶ್ರೀ ವೆಂಕಟೇಶ್ವರ ದರ್ಶನ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಮೂಲಕ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಬಹುದು ಎಂಬ ನಂಬಿಕೆ ಇಂದ. ವೆಂಕಟೇಶ್ವರ ದೇವಾಲಯಗಳಿಗೆ ಭಕ್ತರು ಜನಸಾಗರದಂತೆ ದರುಶನ ಪಡೆದರು.
ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರ, ಶ್ರೀರಾಮ ದೇವಸ್ಥಾನ, ವಿಠ್ಠಲಮಂದಿರ
ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ವಿವಿಧ ದೇವಾಲಯಗಳಲ್ಲಿ ಶ್ರೀ ವೆಂಕಟೇಶ್ವರ ದರ್ಶನ ಪಡೆದರು.
ದೇವಾಲಯಗಳಲ್ಲಿ ಮಹಿಳಾ ಭಜನಾ ಮಂಡಳಿಯಿಂದ ಗೋವಿಂದ ಭಜನೆ ಮತ್ತು ಸಂಗೀತ ಸೇವೆ ಏರ್ಪಡಿಸಲಾಗಿತ್ತು.
ಬಂದ ಭಕ್ತಾಧಿಗಳಿಗೆ ಲಾಡು, ಪುಳಿಯೋಗರೆ ಪ್ರಸಾದ ನೀಡಲಾಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಬಂದ ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು.

Comments
Post a Comment