ಕೋಡಿಮಠದ ಶ್ರೀ ಹೊಸ ಭವಿಷ್ಯ – ಕರ್ನಾಟಕದಲ್ಲಿ ಇ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ, ದೊಡ್ಡ ತಲೆಗಳು ಉರುಳುತ್
ಕೋಡಿಮಠದ ಶ್ರೀ ಹೊಸ ಭವಿಷ್ಯ – ಕರ್ನಾಟಕದಲ್ಲಿ ಇ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ, ದೊಡ್ಡ ತಲೆಗಳು ಉರುಳುತ್
ವಿಜಯನಗರ: ಕೋಡಿಮಠದ ಶ್ರೀಗಳಿಗೆ (ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ) ಹೊಸಪೇಟೆಯಲ್ಲಿ ಭಕ್ತ ಕುಟುಂಬದವರು ಇಂದು ಶುಕ್ರವಾರ ಪಾದಪೂಜೆ ನೆರವೇರಿಸಿದರು. ಪಾದಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀ ಮಾರ್ಮಿಕವಾಗಿ ಭವಿಷ್ಯ (Prediction) ನುಡಿದಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು. ಇದೇ ವರ್ಷ 2023ಕ್ಕೆ ಜಾಗತಿಕ ಮಟ್ಟದಲ್ಲಿ ಈ ರೀತಿಯ ಸಮಸ್ಯೆ ಎದುರಾಗಲಿದೆ. ಸಾಧು ಸಂತರಿಗೆ ಸಮಸ್ಯೆಯಾಗುತ್ತಿದೆ. ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ. ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ನಿವಾಸದಲ್ಲಿ ಪಾದಪೂಜೆ ಸ್ವೀಕರಿಸಿದ ಬಳಿಕ ಶ್ರೀಗಳು (ಕೋಡಿಮಠ ಸೀರ್) ಈ ಹೇಳಿಕೆ ನೀಡಿದ್ದಾರೆ.
ಇನ್ನು ರಾಜಕೀಯವಾಗಿಯೂ ಮಾತನಾಡಿರುವ ಕೋಡಿ ಶ್ರೀ ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ (ಕರ್ನಾಟಕ ಅಸೆಂಬ್ಲಿ ಚುನಾವಣೆ 2023). ಸಮ್ಮಿಶ್ರ ಸರ್ಕಾರ ಅಧಿಕಾರ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದು, ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.
ಕೊರೊನಾ ಬಂದ್ರೂ ಕೂಡ ಅದು ತೊಂದರೆಯಾಗಲ್ಲ. ಸಂಕ್ರಾಂತಿ- ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಹೇಗೆ ಆಯಿತೋ ಹಾಗೆಯೇ ಆಗುತ್ತದೆ. ಸಂಕ್ರಾಂತಿಗೆ ಇನ್ನೂ ಎರಡು ದಿನಗಳಿವೆ, ಸಂಕ್ರಾಂತಿ ಭವಿಷ್ಯ, ಯುಗಾದಿ ಭವಿಷ್ಯ ಆ ಕಾಲಕ್ಕೆ ಹೇಳಬೇಕಿದೆ ಎಂದು ಕೋಡಿಮಠದ ಪೀಠಾಧ್ಯಕ್ಷ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಸದ್ಯದಲ್ಲೇ ಮತ್ತೊಂದು ಭವಿಷ್ಯ ನುಡಿಯುವ ಸೂಚನೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಕೋಡಿಮಠದ ಪೀಠಾಧ್ಯಕ್ಷ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಈ ಭವಿಷ್ಯ ನುಡಿದಿದ್ದರು:
ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ, ಮುಂದಿನ ಯುಗಾದಿವರೆಗೆ ಹಲವು ಕಾಯಿಲೆಗಳು ತಾಂಡವವಾಡಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ ಎಂದು ಕೋಡಿ ಶ್ರೀ ಭವಿಷ್ಯ ಹೇಳಿದ್ದರು.
ಅದಕ್ಕೂ ಮುನ್ನ ಆಗಸ್ಟ್ ತಿಂಗಳಿನಲ್ಲಿ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ ವಾಣಿ ನುಡಿದಿದ್ದರು. ಅದನ್ನು ನೆನಪಿಸಿಕೊಂಡು ಅಂದು ಮಾತನಾಡಿದ್ದ ಸ್ವಾಮೀಜಿ, 2022 ವರ್ಷದ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ. ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು-ನೋವು ಆಗುತ್ತೆ ಅಂತಾ ಹೇಳಿದ್ದೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ಕುಸಿಯುತ್ತೆ ಎಂದು ಹೇಳಿದ್ದೆ. ಈಗ ನಾವು ಹೇಳಿದಂತೆಯೇ ಆಗಿದೆ. ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಹೆಚ್ಚಾಗಿ ಬರುತ್ತವೆ. ವಿಷಜಂತುಗಳು ಹೊರಗೆ ಬಂದು ತೊಂದರೆ ಕೊಡುತ್ತವೆ. ಪ್ರಕೃತಿಯಿಂದ ಅಲ್ಲೊಲ ಕಲ್ಲೋಲ ಆಗುತ್ತೆ. ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಅದನ್ನು ಕೂಡ ಕಾದು ನೋಡಿ.ಬೆಂಕಿಯಿಂದ ಹೆಚ್ಚೆಚ್ಚು ಸಮಸ್ಯೆ ಆಗಲಿದೆ. ಮತಾಂಧತೆ, ಜಾತೀಯತೆ, ಆಕ್ರೋಶದಿಂದಾಗಿ ಕಾರ್ತಿಕ ಮಾಸದಲ್ಲಿ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದರು.


Comments
Post a Comment