ಮಧುರೆಯಲ್ಲಿ ವಿಜಯ ಸಂಕಲ್ಪ ಅಭಿ ಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ "
" ಮಧುರೆಯಲ್ಲಿ ವಿಜಯ ಸಂಕಲ್ಪ ಅಭಿ ಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ "
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆಯಲ್ಲಿ ಹಮ್ಮಿ ಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು. ರೇಷ್ಮೆ ಮಂಡಳಿ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆರ್. ಗೋವಿಂದರಾಜ್, ತಾಲೂಕು ಅಧ್ಯಕ್ಷ ಟಿ ಎನ್ ನಾಗರಾಜ್, ನಗರ ಘಟಕದ ಅಧ್ಯಕ್ಷ ಶಿವಶಂಕರ್, ಮುಖಂಡರಾದ ಸಾರಥಿ ಸತ್ಯಪ್ರಕಾಶ್, ಟಿ.ವಿ.ಲಕ್ಷ್ಮಿ ನಾರಾಯಣ್, ರಘುರಾಮ್, ಶಿವಾನಂದ ರೆಡ್ಡಿ, ಮುದ್ದಪ್ಪ,ಲಗ್ಗೆರೆ ನಾರಾಯಣಸ್ವಾಮಿ, ಇತರರು ಭಾಗವಹಿಸಿದ್ದರು,
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಮತದಾರರ ಮನೆ ಬಾಗಿಲಿಗೆ ಹೋಗಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು,
ಮಧುರೆ ಹೋಬಳಿಯಲ್ಲಿ ಏರ್ಪಡಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರು ಚೀನಾ ಮಾಡಿದ ತಪ್ಪಿನಿಂದಾಗಿ ಇಡೀ ಪ್ರಪಂಚವೇ ಕರೋನಾ ಅನುಭವಿಸುವಂತಾಯಿತು. ಇಂತಹ ರಾಷ್ಟ್ರೀಯ ಉತ್ಪತ್ತಿನ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಸಮರೋಪಾದಿಯಲ್ಲಿ ದೇಶದ ಜನತೆಗೆ ಉಚಿತ ಲಸಿಕೆ ನೀಡುವ ಮುಖಾಂತರ ಮಹಾಮಾರಿಯನ್ನು ಕಟ್ಟುಹಾಕುವಲ್ಲಿ ಸರ್ಕಾರ ಐತಿಹಾಸಿಕ ಸಾಧನೆ ಮಾಡಿದೆ ಪ್ರಧಾನಿ ನರೇಂದ್ರ ಮೋದಿಯವರ ಈ ಸಾಧನೆ ಎಂದು ಸ್ಲಾಘನೀಯ ಹೇಳಿದರು, ದೇಶದ ಪ್ರತಿಯೊಬ್ಬ ಪ್ರಜೆಗೂ ಲಸಿಕೆ ನೀಡುವಲ್ಲಿ ಯಾವುದೇ ಜಾತಿ ಧರ್ಮ ನೋಡಲಿಲ್ಲ ಯಾವುದೇ ಪಕ್ಷ ಬೇದ ಇಲ್ಲದೆ ಪ್ರತಿಯೊಬ್ಬರಿಗೂ ಲಸಿಕೆಯನ್ನು ನೀಡಿದ ಕೀರ್ತಿ ಪ್ರಧಾನಿ ಮೋದಿ ಯವರಿಗೆ ಸಲ್ಲುತ್ತದೆ,
ಮುಂದಿನ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಕಾರ್ಯಕರ್ತರು ಮುಖಂಡರು ನಾಯಕರುಗಳು ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡುವ ಮೂಲಕ ಬಿಜೆಪಿಗೆ ಶ್ರಮಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರೆ ನೀಡಿದರು. ಕರಪತ್ರ ವಿತರಣೆ ಮಧುರೆಯಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನ ವೇದಿಕೆ ಕಾರ್ಯಕ್ರಮದ ಮೂಲಕ ಬಿಜೆಪಿ ಮುಖಂಡರೊಂದಿಗೆ ಮನೆಮನೆಗೂ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯ ಪಟ್ಟಿಯುಳ್ಳ ಕರಪತ್ರ ವಿತರಿಸಿದರು, ಮುಂಬರುವ ಚುನಾವಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತದಾರರಿಗೆ ಮನವರಿಕೆ ಮಾಡಿ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಆರ್ ನಾಗರಾಜ್
ಪಬ್ಲಿಕ್ ರಿಪೋರ್ಟ್ ವರದಿಗಾರರು
ಬೆಂಗಳೂರು ಗ್ರಾಮಾಂತರ ಜಿಲ್ಲೆ.
Comments
Post a Comment