ರಾಜನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿ ಹಾಗೂ ಜಲ ಜೀವನ್ ಮಿಷನ್ ಮನೆ ಮನೆಗೆ ಗಂಗೆ ಕಾಮಗಾರಿಗಳ ಗುದ್ದಲಿ ಪೂಜೆ "
" ರಾಜನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿ ಹಾಗೂ ಜಲ ಜೀವನ್ ಮಿಷನ್ ಮನೆ ಮನೆಗೆ ಗಂಗೆ ಕಾಮಗಾರಿಗಳ ಗುದ್ದಲಿ ಪೂಜೆ "
ಯಲಹಂಕ ತಾಲ್ಲೂಕು ಹೆಸರಘಟ್ಟ ಹೋಬಳಿ ರಾಜನಕುಂಟೆಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿ ಹಾಗೂ ಜಲಜೀವನ್ ಮಿಷನ್ ಮನೆಮನೆಗೆ ಗಂಗೆ ಕಾಮಗಾರಿ ಗುದ್ದಲಿ ಪೂಜೆಯನ್ನು ಯಲಹಂಕ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು, ಈ ಸಂದರ್ಭದಲ್ಲಿ ರಾಜನಕುಂಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ನರಸಿಂಹಮೂರ್ತಿ ರವರು, ಯಲಹಂಕ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಹನುಮಯ್ಯನವರು, ಬಿಜೆಪಿ ಮುಖಂಡರಾದ ಚೊಕ್ಕನಹಳ್ಳಿ ವೆಂಕಟೇಶ್ ರವರು, ಬಿಜೆಪಿ ಮುಖಂಡರಾದ ಸತೀಶ್ ಮತ್ತು ಬಿಜೆಪಿ ಮುಖಂಡ ಮಂಜುನಾಥ್ರ, ರಾಜನಗುಂಟೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಕೆ ವೀರಣ್ಣನವರು, ಪಿಡಿಒ ನಾಗರಾಜ್ ರವರು, ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರುಗಳು, ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ಮೂಲಕ ಗುದ್ದಲಿ ಪೂಜೆ ಯಶಸ್ವಿಯಾಗಲು ಕಾರಣರಾದರು.
ಆರ್ ನಾಗರಾಜ್ ಪಬ್ಲಿಕ್ ರಿಪೋರ್ಟ್ ವರದಿಗಾರರು
ಬೆಂಗಳೂರು ಗ್ರಾಮಾಂತರ ಜಿಲ್ಲೆ.

Comments
Post a Comment