ಚಿಕ್ಕಬಳ್ಳಾಪುರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ "
" ಚಿಕ್ಕಬಳ್ಳಾಪುರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
ಚಿಕ್ಕಬಳ್ಳಾಪುರ ಜಿಲ್ಲೆ ಚಿಕ್ಕ್ಬಳ್ಳಾಪುರ ನಗರದ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತಶ್ರಯದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಮಾನ್ಯ ಶಾಸಕರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು, ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಅದ ಡಾ. ಕೆ ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ಮಡಿವಾಳ ಮಾಚಿದೇವರ ಹೂವಿನ ಪಲ್ಲಕ್ಕಿ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ಕೃಷ್ಣ ಟಾಕೀಸ್ ಪಕ್ಕದ ಮಡಿವಾಳ ಸಂಘದ ಕಚೇರಿ ಮುಂಭಾಗದಿಂದ ಬಜಾರ್ ರಸ್ತೆ ಮೂಲಕ ಡಾ. ಬಿ ಆರ್ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ಮಾಡಲಾಯಿತು,ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರು ಆದ ಡಾ.ಕೆ.ಸುಧಾಕರ್, ಎನ್. ಎಂ.ನಾಗರಾಜ್ ಮಾನ್ಯ ಜಿಲ್ಲಾಧಿಕಾರಿಗಳು ಚಿಕ್ಕಬಳ್ಳಾಪುರ ಜಿಲ್ಲೆ, ಟಿ ಶಿವಶಂಕರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಜಿಲ್ಲೆ. ಡಿ.ಎಲ್ ನಾಗೇಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಿಕ್ಕಬಳ್ಳಾಪುರ ಜಿಲ್ಲೆ. ಎನ್ ಮುನೀಶ್ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆ.ಮಡಿವಾಳ ಮಾಚಿದೇವ ಜಯಂತಿ ಕುರಿತು ಉಪನ್ಯಾಸ ಅರ್ಥಶಾಸ್ತ್ರ ಉಪನ್ಯಾಸಕರು ಸರ್. ಕೆ ವಿ ನವೀನ್ ಕುಮಾರ್ ಮಾನ್ಯ ಉಪಾಧ್ಯಕ್ಷರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬೆಂಗಳೂರು. ಎಂ.ವಿ ಪದವಿ ಪೂರ್ವ ಕಾಲೇಜು ಚಿಕ್ಕಬಳ್ಳಾಪುರ. ಕೆ. ವಿ. ನಾಗರಾಜ್ ಮಾನ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು ಡಿಎಸ್ ಆನಂದ್ ರೆಡ್ಡಿ ಬಾಬು ಮಾನ್ಯ ಅಧ್ಯಕ್ಷರು ನಗರಸಭೆ ಚಿಕ್ಕಬಳ್ಳಾಪುರ, ಕೆ ಕೃಷ್ಣಮೂರ್ತಿ ಮಾನ್ಯ ಅಧ್ಯಕ್ಷರು ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ,ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕಗಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು, ಚಿಕ್ಕಬಳ್ಳಾಪುರದ ನಗರದಲ್ಲಿ ಮಡಿವಾಳ ಡೋಬಿ ಘಾಟ್ ನಿರ್ಮಿಸಲು ಎರಡು ಎಕರೆ ಜಮೀನು,ಇಸ್ತ್ರಿ ಪೆಟ್ಟಿಗೆಯ ಕಿಟ್ ನೀಡುವುದಾಗಿ ಮಾನ್ಯ ಸಚಿವರು ಆದ ಡಾಕ್ಟರ್ ಕೆ ಸುಧಾಕರ್ ತಿಳಿಸಿದರು.
ಎನ್. ಶೋಭ
ಪಬ್ಲಿಕ್ ರಿಪೋರ್ಟ್ ವರದಿಗಾರರು ಚಿಕ್ಕಬಳ್ಳಾಪುರ ಜಿಲ್ಲೆ.

Comments
Post a Comment