ವಿಶ್ವವಾಣಿ ಫೌಂಡೇಶನ್ ಹಾಗೂ ಸಮೃದ್ಧಿ ಸಂಜೀವಿನಿ ಮಾಸಿಕ ಸಂತೆ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನಾ ಸಮಾರಂಭ "
"ವಿಶ್ವವಾಣಿ ಫೌಂಡೇಶನ್ ಹಾಗೂ ಸಮೃದ್ಧಿ ಸಂಜೀವಿನಿ ಮಾಸಿಕ ಸಂತೆ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನಾ ಸಮಾರಂಭ "
ರಾಜಾನಕುಂಟೆ ಮತ್ತು ಅರಕೆರೆ ಗ್ರಾಮ ಪಂಚಾಯಿತಿ ಮತ್ತು ವಿಶ್ವವಾಣಿ ಫೌಂಡೇಶನ್ ಹಾಗೂ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟ ಸಹಯೋಗದೊಂದಿಗೆ ಪ್ರದರ್ಶನ ಮತ್ತು ಮಾರಾಟ ಮೇಳ ಸಮೃದ್ಧಿ ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮವನ್ನು ಸನ್ಮಾನ್ಯ ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರು ಅಧ್ಯಕ್ಷರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಜನಪ್ರಿಯ ಶಾಸಕರು ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಟಿಟಿಡಿ ಸದಸ್ಯರು, ಹಾಗೂ ವಾಣಿಶ್ರೀ ವಿಶ್ವನಾಥ್ ರವರು ವಿಶ್ವವಾಣಿ ಫೌಂಡೇಶನ್ ಕಾರ್ಯದರ್ಶಿಗಳು ಹಾಗೂ ಅಧ್ಯಕ್ಷರು ರೈತರ ಸೇವಾ ಸಹಕಾರ ಸಂಘ, ಸಿಂಗನಾಯಕನಹಳ್ಳಿ ಇವರು ಸಮೃದ್ಧಿ ಸಂಜೀವಿನಿ ಮಾಸಿಕ ಸಂತೆ ಪ್ರದರ್ಶನ ಮತ್ತು ಮಾರಾಟಮೇಳ ಉದ್ಘಾಟಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ ಜಿ ನರಸಿಂಹಮೂರ್ತಿ ರ ವರು ಅಧ್ಯಕ್ಷರು ರಾಜನಕುಂಟೆ ಗ್ರಾಮ ಪಂಚಾಯಿತಿ,ಹಾಗೂ ಅರಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕುಮಾರ್, ನಾಗರಾಜ್ ರವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜನಕುಂಟೆ ಗ್ರಾಮ ಪಂಚಾಯಿತಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ದಿಬ್ಬೂರು ಜಯಣ್ಣನವರು, ಯಲಹಂಕ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಹನುಮಯ್ಯನವರು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೆ ವೀರಣ್ಣನವರು, ಚೊಕ್ಕನಹಳ್ಳಿ ವೆಂಕಟೇಶ್ ರವರು, ವಕೀಲರಾದ ಕಡತನ ಮಲೆ ಸತೀಶ್ ರವರು, ಬಿಜೆಪಿ ಮುಖಂಡರಾದ ಮಂಜುನಾಥ್ ರವರು, ಅಂಬಿಕಾ ರಾಜೇಂದ್ರ ಕುಮಾರ್ ರವರು ಉಪಾಧ್ಯಕ್ಷರು ರಾಜನ ಕುಂಟೆ ಗ್ರಾಮ ಪಂಚಾಯಿತಿ, ಸದರಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಎಲ್ಲಾ ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶಾಲಾ ಶಿಕ್ಷಕರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಸ್ತ್ರಿ ಶಕ್ತಿ ಮತ್ತು ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸದಸ್ಯರುಗಳು ಹಾಗೂ ಎಲ್ಲಾ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು,
ಈ ಕಾರ್ಯಕ್ರಮದಲ್ಲಿ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರು ಮಾತನಾಡಿ ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯಡಿ ರೂಪುಗೊಂಡಂತಹ ಕಾರ್ಯಕ್ರಮವು ಗ್ರಾಮ ಪಂಚಾಯತಿ ಮಟ್ಟದ ಮಹಿಳಾ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘದ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸುವ ಉತ್ಪನ್ನಗಳಿಗೆ ಯಾವುದೇ ಮಧ್ಯವರ್ತಿಗಳಿಗೆ ಕಮಿಷನ್ ಪಾವತಿಸದೆ, ನೇರವಾಗಿ ಗ್ರಾಹಕರಿಗೆ ತಲುಪಿಸಲು ಸೂಕ್ತ ಮಾರುಕಟ್ಟೆ,ಪ್ರದರ್ಶನ ಮಾಡಲು ಉತ್ತಮ ಅವಕಾಶ ಕಲ್ಪಿಸಿ ಕೊಟ್ಟಿರುತ್ತದೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳ ಸ್ಥಳೀಯವಾಗಿ ಉತ್ಪಾದಿಸುವ ಉತ್ಪನ್ನಗಳಿಗೆ ಪ್ರತಿ ತಿಂಗಳು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಾಸಿಕ ಸಂತೆಯನ್ನು ಆಯೋಜಿಸಲಾಗಿದೆ, ಲಾಭದಾಯಕ ಆದಾಯವನ್ನು ಒದಗಿಸುವುದರ ಮೂಲಕ ಬಡತನ ತೀವ್ರತೆಯನ್ನು ಕಡಿಮೆಗೊಳಿಸುವುದು ಮತ್ತು ಸಮುದಾಯ ಸಂಸ್ಥೆಗಳ ಮೂಲಕ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವುದರಿಂದಾಗಿ ಗ್ರಾಮೀಣ ಜನರ ಜೀವನ ಮಟ್ಟದಲ್ಲಿ ಸಮರ್ಥನೆಯವಾದ ಅಭಿವೃದ್ಧಿಯನ್ನು ಕಾಣುವುದು ಎಂದು ಸನ್ಮಾನ್ಯ ಜನಪ್ರಿಯ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರು ತಿಳಿಸಿದರು,
ಈ ಕಾರ್ಯಕ್ರಮದಲ್ಲಿ ವಿಶ್ವವಾಣಿ ಫೌಂಡೇಶನ್ ವತಿಯಿಂದ ರಾಜನಕುಂಟೆ ಹಾಗೂ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಣ್ಣು ಮಕ್ಕಳಿಗೆ ಉಚಿತವಾಗಿ ಟೈಲರಿಂಗ್ ಮಿಷನ್ ವಿತರಣೆ ಮಾಡಲಾಯಿತು, ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಬಹುಮಾನ ವಿತರಣೆ , ಸಹಾಯ ಸಂಘಗಳ ಸದಸ್ಯರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು,ಈ ಎಲ್ಲಾ ಕಾರ್ಯಕ್ರಮವನ್ನು ರಾಜನಕುಂಟೆ ಗ್ರಾಮ ಪಂಚಾಯತಿ ಗೌರವಾನ್ವಿತ ಸರ್ವ ಸದಸ್ಯರಗಳ ಸಹಕಾರದೊಂದಿಗೆ, ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗದವರು, ರಾಜನಕುಂಟೆ ಗ್ರಾಮ ಪಂಚಾಯಿತಿ, ಎನ್ ಆರ್ ಎಲ್ ಎಂ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು, ಒಕ್ಕೂಟದ ಕಾರ್ಯದರ್ಶಿ, ಖಜಾಂಚಿ ಹಾಗೂ ಪದಾಧಿಕಾರಿಗಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು,
ಆರ್, ನಾಗರಾಜ್
ಪಬ್ಲಿಕ್ ರಿಪೋರ್ಟ್ ಬೆಂಗಳೂರು ಗ್ರಾಮಾಂತರ ಜಿಲ್ಲೆ .
Comments
Post a Comment