Skip to main content

ನಾಮಪತ್ರ ತಿರಸ್ಕೃತ ಭೀತಿಯಲ್ಲಿರುವ ಸವದತ್ತಿ ಬಿಜೆಪಿ ಅಭ್ಯರ್ಥಿ

 

ಬೆಳಗಾವಿಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ (Ratna Mamani) ಯಡವಟ್ಟು ಮಾಡಿಕೊಂಡು ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ಅಧಿಕಾರಿಗಳು ಸಮಯ ನೀಡಿದ್ದು, ಚೆಂಡು ಈಗ ಸವದತ್ತಿ ಆರ್‌ಓ ಅಂಗಳದಲ್ಲಿದೆ.

ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ (AAP) ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಫಾರಂ ನಂಬರ್ 29ರ ನಮೂನೆ 2019ರಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ 2018ರ ನಮೂನೆ ತುಂಬಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯ ಬಳಿಕ ಏ.20ರ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಸಹ ಕಾನೂನು ಬಾಹಿರ ಎಂದು ಕಾಂಗ್ರೆಸ್, ಆಪ್ ಆರೋಪಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಸಮಯ ನಿಗದಿ ಮಾಡಲಾಗಿದೆ. ಫಲಿತಾಂಶ ಆಮೇಲೆ ಹೇಳುತ್ತೇನೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮಾಣ ಪತ್ರ ನಿಯಮಬದ್ಧವಾಗಿಲ್ಲ. ಇದರಲ್ಲಿ ಲೋಪದೋಷಗಳಿವೆ ಎಂದು ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ಇನ್ನೊಂದೆಡೆ ಚುನಾವಣಾ ಅಧಿಕಾರಿ ಯಾವುದೇ ನಿರ್ಣಯಕ್ಕೆ ಬಾರದೇ ಸಮಯ ನಿಗದಿಪಡಿಸಿದ್ದು ಕುತೂಹಲ ಕೆರಳಿಸಿದೆ.

ಡಿಕೆಶಿ ಪ್ರತಿಕ್ರಿಯೆ: ಸವದತ್ತಿ ಯಲ್ಲಮ್ಮ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರತ್ನಾಮಾಮನಿ ನಾಮಪತ್ರದಲ್ಲಿರುವ ಲೋಪದೋಷಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ದೊಡ್ಡ ಯಡವಟ್ಟಾಗಿದೆ. ಅದರ ಬಗ್ಗೆ ಮುಖ್ಯಮಂತ್ರಿ ಕಚೇರಿಯಿಂದ ಒತ್ತಡ ಮಾಡುತ್ತಿದ್ದಾರೆ. ಚುನಾವಣಾಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶದ ಮೇರೆಗೆ ಒತ್ತಡ ಹಾಕಲಾಗುತ್ತಿದೆ ಎಂದುಆರೋಪಿಸಿದರು.


 

Comments

Popular posts from this blog

Methodist Church in India Announces New Leadership, Disputes Former Bishop’s Claims

ಬೆಂಗಳೂರಿನಲ್ಲಿ ಡಿಸೆಂಬರ್ 14, 15ರಂದು ಮೂರನೇ ಆವೃತ್ತಿಯ ಜಾಗತಿಕ ಯೋಗ ಶೃಂಗ

BHARATIYA JAIN SANGHATANA Women’s Wing, Bengaluru Chapter PRESENTS”VANDE MATARAM”The Pride of Nation