ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ…!

 

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ…!


ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು.

ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims