ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ ಮಾಡಿದ ಅಸ್ಸಾಂ ಕಾಂಗ್ರೆಸ್ ನಾಯಕಿ ಪಕ್ಷದಿಂದ ಉಚ್ಛಾಟನೆ...!
ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ ಮಾಡಿದ ಅಸ್ಸಾಂ ಕಾಂಗ್ರೆಸ್ ನಾಯಕಿ ಪಕ್ಷದಿಂದ ಉಚ್ಛಾಟನೆ...!
ನವದೆಹಲಿ : ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ.ಕಿರುಕುಳ ನೀಡಿದ್ದಾರೆ ಎಂದು ಅಸ್ಸಾಂನ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತ ದತ್ತಾ ಗಂಭೀರ ಆರೋಪ ಮಾಡಿದ್ದರು. ಹಾಗಾಗಿ ಅಂಕಿತ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದಾರೆ.

ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ ಕಾಂಗ್ರೆಸ್ ಪಕ್ಷದಿಂದ ಅಂಕಿತಾಗೆ ಗೇಟ್ ಪಾಸ್ ನೀಡಿದ್ದಾರೆ. ಕಿರುಕುಳ ನೀಡಿರುವ ಕುರಿತು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಡಾ. ಅಂಕಿತ ದತ್ತಾ ಆರೋಪಿಸಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅಂಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಅಂಕಿತಾ ದತ್ತಾ ಅಸ್ಸಾಂನಲ್ಲಿ ತರುಣ್ ಗೊಗೊಯ್ ಅವರ ಸರಕಾರದಲ್ಲಿ ಸಚಿವರಾಗಿದ್ದ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಗಿದ್ದ ಅಂಜನ್ ದತ್ತಾ ಅವರ ಪುತ್ರಿಯಾಗಿದ್ಧಾರೆ. ಬಿ.ವಿ.ಶ್ರೀನಿವಾಸ್ ಕಳೆದ ಆರು ತಿಂಗಳಿಂದ ಕಿರುಕುಳ ನೀಡಿದ್ದಲ್ಲದೆ, ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರಪಿಸಿದರು
Comments
Post a Comment