ಪುಲಕೇಶಿ ನಗರ; ಅಖಂಡ ಶ್ರೀನಿವಾಸ್ ಅವರಿಂದ ಅದ್ದೂರಿ ರೋಡ್ ಶೋ ಮೂಲಕ ಮತಯಾಚನೆ.
ಪುಲಕೇಶಿ ನಗರ; ಅಖಂಡ ಶ್ರೀನಿವಾಸ್
ಅವರಿಂದ ಅದ್ದೂರಿ ರೋಡ್ ಶೋ
ಮೂಲಕ ಮತಯಾಚನೆ.
ಎ.ಸಿ.ಶ್ರೀನಿವಾಸ್ , ಅಖಂಡ ಶ್ರೀನಿವಾಸ್ ಮಧ್ಯೆ ಜಿದ್ದಾಜಿದ್ದಿ ಹೋರಾಟ.
ಕಾಂಗ್ರೆಸ್ ಟಿಕೇಟ್ ವಂಚಿತರಾಗಿ ಬಹುಜನ ಸಮಾಜ ಪಕ್ಷದಿಂದ ಪುಲಕೇಶಿ ನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಕ್ಷೇತ್ರದ ಠಾಣೆ ರಸ್ತೆ, ಸಗಾಯಿಪುರಂ, ಡಿ.ಜೆ.ಹಳ್ಳಿ ಸೇರಿದಂತೆ ವಿವಿಧಡೆ ಅದ್ದೂರಿಯಾಗಿ ರೋಡ್ ಶೋ ನಡೆಸಿದರು.
ರೋಡ್ ಶೋನಲ್ಲಿ ಬಿಎಸ್ ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಸೇರಿದಂತೆ ಸಾವಿರಾರು ಅಖಂಡ ಶ್ರೀನಿವಾಸ್ ಅವರ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ಠಾಣಿ ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿದ ಅಖಂಡ ಶ್ರೀನಿವಾಸ್ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎರಡು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ವಿಶೇಷವಾಗಿ ಅನೇಕ ಭಾಗಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಕೂಡ ಸುಧಾರಿಸಲಾಗಿದೆ. ಬಿಜೆಪಿ ಸರ್ಕಾರವಿದ್ದರೂ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಿಸಲಾಗಿದೆ ಎಂದರು.
ಕಳೆದ ಬಾರಿ 80 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಾಗಿತ್ತು ಈ ಭಾರೀ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟಾರೆಯಾಗಿ ಕಾಂಗ್ರೆಸ್ ನಿಂದ ಟಿಕೇಟ್ ವಂಚಿತರಾಗಿರುವ ಅಖಂಡ ಶ್ರೀನಿವಾಸ್ ಹೊಸದಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾಗಿರುವ ಎ.ಸಿ.ಶ್ರೀನಿವಾಸ್ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.ಗೆಲುವು ಸಾಧಿಸುವುದು ನಿಶ್ಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ.
Comments
Post a Comment