ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

*ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತುಗಳು:* ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ. ಅದಕ್ಕೆ ಸರ್ಕಾರ ಹಾಗೂ ಮಂತ್ರಿಗಳು ಬೇರೆ ರಾಜ್ಯಗಳ ಜೊತೆ ಸಂಪರ್ಕ ಮಾಡುತ್ತಿದ್ದಾರೆ. 5 ಕೆ.ಜಿ ಯಷ್ಟು ನೀಡಲು ನಮ್ಮ ಬಳಿ ಅಕ್ಕಿ ಇದೆ. ಉಳಿದ 5 ಕೆ ಜಿಗೆ ಹೊಂದಿಸುತ್ತಿದ್ದೇವೆ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ. ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನ ಮುಂಬರುವ ಸಂಸತ್, ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಯಡಿಯೂರಪ್ಪ ಅ...