ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆ
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಕೆ ವರಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ರಿಜ್ವಾನ್ ರವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 20ಜನರ ಸಂಖ್ಯಾ ಬಲವಿರುವ ಬೂದಿಗೆರೆ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತರು 14ಜನರಿದ್ದರು ಅಧ್ಯಕ್ಷರ ಸ್ಥಾನಕ್ಕೆ ಮಹಿಳಾ ಮೀಸಲು ಬಂದ ಕಾರಣದಿಂದ ಮೊದಲ ಬಾರಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದ ವರಲಕ್ಷ್ಮೀ ಕೆ ರವರಿಗೆ ಅಧ್ಯಕ್ಷ ಸ್ಥಾನ ವರದಾನವಾಗಿ ಬಂದಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ರವರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು,ನಾಯಕರುಗಳು, ಮಾಜಿ ಅದ್ಯಕ್ಷರು ಭಾಗವಹಿಸುವ ಮೂಲಕ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರಾದ ಕೆ ವರಲಕ್ಷ್ಮಿ ರವರು ನಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರುಗಳಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಗ್ರಾಮ ಪಂಚಾಯಿತಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು. ಬೀದಿದೀಪ. ರಸ್ತೆ. ಚರಂಡಿ, ವಸತಿ ಇನ್ನಿತರ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸಿ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.
ಆರ್ ನಾಗರಾಜ್ ಪಬ್ಲಿಕ್ ರಿಪೋರ್ಟ್ ವರದಿಗಾರರು ಬೆಂಗಳೂರು ಗ್ರಾಮಾಂತರ
Comments
Post a Comment