ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಪ್ರೇಮ ಕುಮಾರಿ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಪ್ರೇಮ ಕುಮಾರಿ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಪ್ರೇಮ ಕುಮಾರಿ ಆಯ್ಕೆಯಾಗಿದ್ದಾರೆ. ಗುರುವಾರ ಅದ್ಯಕ್ಷ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಒಟ್ಟು 12ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಅಭ್ಯರ್ಥಿಗಳಿಗೂ ತಲಾ 6ಮತಗಳು ಚಲಾವಣೆಗೊಂಡು ಸಮಬಲ ಸಾಧಸಿದರು. ಬಳಿಕ ಲಾಟರಿ ಮೂಲಕ ಅಧ್ಯಕ್ಷರನ್ನು ನೇಮಕ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಲೋಕೋಯೋಗಿ ಇಲಾಖೆ ಎಇಇ ಜಯಪ್ರಕಾಶ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರಾದ ಪ್ರೇಮ ಕುಮಾರಿಯವರು ಎಲ್ಲ ಸದಸ್ಯರಿಗೆ ಶುಭಾಶಯ ತಿಳಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆನಂದ್ ಕುಮಾರ್ ಪಿ.ಎಲ್ .ಡಿ ಬ್ಯಾಂಕ್ ಮಾಜಿ ನಿರ್ದೇಶಕರಾದ ರಾಜಗೋಪಾಲ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮನು, ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, ಗ್ರಾಮದ ಮುಖಂಡರು ನಾಯಕರುಗಳು ಭಾಗವಹಿಸಿದರು. ಅಧ್ಯಕ್ಷರಾದ ಪ್ರೇಮ ಕುಮಾರಿ ರವರು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು. ಬೀದಿ ದೀಪ. ರಸ್ತೆ. ಚರಂಡಿ. ವಸತಿ ಇನ್ನಿತರ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸಿ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಆರ್ ನಾಗರಾಜು. ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.
Comments
Post a Comment