ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ*


 *ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ* 


*ವಿಷಯ: ರಾಜ್ಯದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿಯನ್ನು ಖಂಡಿಸಿ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಪ್ರತಿಭಟನಾ ದಿನ*


 _ಯುಬಿಡಿಟಿ ಉಳಿಸಲು ಹಾಗೂ ಶೆ.50 ಪೇಮೆಂಟ್ ಕೋಟಾ ರದ್ದುಗೊಳಿಸಲು ಆಗ್ರಹಿಸಿ ನಡೆಯುವ ದಾವಣಗೆರೆ ಬಂದ್ ಗೆ ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ ಬೆಂಬಲಿಸುತ್ತದೆ._ 


ಇಂದು ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದಾವಣಗೆರೆ ಬಂದ್ ಗೆ ಬೆಂಬಲಿಸಿ ಹಾಗೂ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿಯನ್ನು ಖಂಡಿಸಿ ಅಖಿಲ ಕರ್ನಾಟಕ ಪ್ರತಿಭಟನಾ ದಿನವನ್ನು ನಗರದ ತಾಲೂಕು ಆಫೀಸ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ, ಮೆರವಣಿಗೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.


ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ ಮಾತನಾಡಿ.... ಕಳೆದ ಒಂದು ತಿಂಗಳಿನಿಂದ, ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜನ್ನು ಉಳಿಸಿಕೊಳ್ಳಲು ಹೋರಾಟ ನಡೆಸುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಅತ್ಯಂತ ಹಳೆಯ ಕಾಲೇಜುಗಳಲ್ಲಿ ಒಂದಾದ ಹಾಗೂ ರಾಜ್ಯದ ಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಾದ ಯುಬಿಡಿಟಿಯಲ್ಲಿ ಶೇ.50 ರಷ್ಟು ಪ್ರಮಾಣದ ಸೀಟುಗಳಲ್ಲಿ ಭೀಕರ ಶುಲ್ಕ ಏರಿಕೆಯನ್ನು ಮಾಡಿ, 97 ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿಗಳಿಂದ ಪಡೆಯಲು ನಿರ್ಧರಿಸಲಾಗಿದೆ. ದೇಶದ ಯಾವುದೇ, ಸರ್ಕಾರದ ದೇಣಿಗೆಯಿಂದ ನಡೆಯುವ ಒಂದು ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಪ್ರಮಾಣದ ಶುಲ್ಕ ಪಡೆಯುವ ನಿರ್ವಹಣಾ ಕೋಟಾದ ಸೀಟುಗಳ ಸಂಖ್ಯೆ ಇಲ್ಲ. ಸರ್ಕಾರಿ ಇಂಜಿನಿಯರಿಂಗ್ ಶುಲ್ಕವೇ, 43 ಸಾವಿರದಷ್ಟಿದ್ದು, ಈಗಾಗಲೇ ಬಡ ವಿದ್ಯಾರ್ಥಿಗಳಿಗೆ ಇದನ್ನು ಭರಿಸಲು ಕಷ್ಟಸಾಧ್ಯವಾಗಿದೆ. ಅಂತಹ ಸಂದರ್ಭದಲ್ಲಿ, ಸರ್ಕಾರಿ ಕಾಲೇಜು ಒಂದರಲ್ಲಿ 97,೦೦೦ ಶುಲ್ಕ ಪಡೆಯುವುದು ವಿದ್ಯಾರ್ಥಿಗಳ ಮೇಲೆ ಒಂದು ಬೃಹತ್ ಪ್ರಹಾರವಾಗಿದೆ. ಇದೇ ರೀತಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಯುವಿಸಿಇ ಕಾಲೇಜ್ ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಏರಿಸುವ ಹಾಗೂ ಕಾಲೇಜು ನಿರ್ವಹಣೆಯ ಹಣವನ್ನು ವಿದ್ಯಾರ್ಥಿಗಳ ಶುಲ್ಕ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇದು ಸಾರ್ವಜನಿಕ ಶಿಕ್ಷಣದ ಮೂಲ ಉದ್ದೇಶಕ್ಕೆ ವಿರುದ್ಧವಾದ ನಡೆಯಾಗಿದೆ. 


 ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ಪ್ರೇಮಿ ಜನ, ರಾಷ್ಟ್ರೀಯ ಶಿಕ್ಷಣ ನೀತಿ (2020) ವಿರೋಧಿಸಿ ನಡೆಸಿದ “ಸಾರ್ವಜನಿಕ ಶಿಕ್ಷಣ ಉಳಿಸಿ” ಎಂಬ ಹೋರಾಟಕ್ಕೆ ಸ್ಪಂದಿಸಿ ರಾಜ್ಯದಲ್ಲಿ ಎನ್.ಈ.ಪಿ(2020) ಹಿಂಪಡೆದು ವಿದ್ಯಾರ್ಥಿಗಳ ಪರವಾದ ನಿಲುವನ್ನು ತಾಳಿದ್ದೀರಿ. ದೇಶದಲ್ಲಿಯೇ, ಶಿಕ್ಷಣ ವಿರೋಧಿ ಹಾಗೂ ಬಡ ಮಕ್ಕಳ ಕೈಯಿಂದ ಉನ್ನತ ಶಿಕ್ಷಣ ಕಸಿಯುವ ಎನ್.ಈ.ಪಿ (2020)ನ್ನು ಹಿಂಪಡೆದ ಏಕೈಕ ರಾಜ್ಯ ಕರ್ನಾಟಕ. ಆದರೆ, ಇದೀಗ ಎನ್.ಈ.ಪಿ (2020)ರ ಭಾಗವೇ ಆಗಿರುವ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಶುಲ್ಕ ಏರಿಕೆ, ಅನುದಾನ ಕಡಿತ ಹಾಗೂ ವಿದ್ಯಾರ್ಥಿಗಳ ಶುಲ್ಕದಲ್ಲಿ ಕಾಲೇಜು ನಿರ್ವಹಣೆ ಇವುಗಳನ್ನು ರಾಜ್ಯದಲ್ಲಿ ಅನುಷ್ಠಾನ ಗೊಳಿಸುತ್ತಿರುವುದು ಅತ್ಯಂತ ವಿಷಾದನೀಯ ಎಂದು ಹೇಳಿದರು.


 *ಬೇಡಿಕೆಗಳು* - 


1. *ಯುಬಿಡಿಟಿ ಕಾಲೇಜಿನಲ್ಲಿ ಶೇ. 50 ಹೆಚ್ಚುವರಿ ಶುಲ್ಕವನ್ನು ಕೈಬಿಡಬೇಕು ಹಾಗೂ ಈ ವರ್ಷ ಪಡೆದಿರುವ ಹೆಚ್ಚುವರಿ ಹಣವನ್ನು ಹಿಂದಿರುಗಿಸಬೇಕು.*

2. *ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ.*

3. *ರಾಜ್ಯದ ಎಲ್ಲ ಸರ್ಕಾರಿ ಹಾಗೂ ವಿವಿಯ ಅಡಿಯಲ್ಲಿ ಬರುವ ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಬೇಕು ಹಾಗೂ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ವಹಿಸಬೇಕು.* 


ಪ್ರತಿಭಟನೆಯ ಅಧ್ಯಕ್ಷತೆ ಎಐಡಿಎಸ್ಓನ ಜಿಲ್ಲಾ ಖಜಾಂಚಿ ಅನುಪಮ ವಹಿಸಿದ್ದರು. ಈ ಪ್ರತಿಭಟನೆಯಲ್ಲಿ ಎಐಡಿಎಸ್ಓನ ಜಿಲ್ಲಾ ಉಪಾಧ್ಯಕ್ಷರಾದ ಎಂ ಶಾಂತಿ, ಉಮಾ, ಪ್ರಮೋದ್ ಎಐಡಿಎಸ್ಓ ಜಿಲ್ಲಾ ಕಛೇರಿ ಕಾರ್ಯದರ್ಶಿ ನಿಹಾರಿಕ,  ವಿದ್ಯಾರ್ಥಿಗಳಾದ ನಂದಿತಾ, ರೇಣುಕಾ, ತಿಪ್ಪೇಶ್, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಕಂಬಳಿ ಮಂಜುನಾಥ

ಜಿಲ್ಲಾ ಕಾರ್ಯದರ್ಶಿ 

ಎಐಡಿಎಸ್ಓ ಬಳ್ಳಾರಿ.

Comments

Popular posts from this blog

Methodist Church in India Announces New Leadership, Disputes Former Bishop’s Claims

ಬೆಂಗಳೂರಿನಲ್ಲಿ ಡಿಸೆಂಬರ್ 14, 15ರಂದು ಮೂರನೇ ಆವೃತ್ತಿಯ ಜಾಗತಿಕ ಯೋಗ ಶೃಂಗ

BHARATIYA JAIN SANGHATANA Women’s Wing, Bengaluru Chapter PRESENTS”VANDE MATARAM”The Pride of Nation