ಚಿಂತಾಮಣಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ; ಆನೇಕಲ್ ಅಂಬೇಡ್ಕರ್ ಯುವಕ ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ.

 

ಚಿಂತಾಮಣಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ;  ಆನೇಕಲ್ ಅಂಬೇಡ್ಕರ್ ಯುವಕ ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ.



ಬೆಂಗಳೂರು ಜನವರಿ2,2025;  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಸ್ಥಾಪಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಕೊಳಕು ಬಟ್ಟೆ ಹೊದಿಸಿ ಅವಮಾನ ಮಾಡಲಾಗುತ್ತಿದೆ.  ಅದನ್ನು ಹೋಗಲಾಡಿಸುವವರೆಗೂ ಉಗ್ರ ಹೋರಾಟ ನಡೆಸಲಾಗುವುದು ಎಂದು ಆನೇಕಲ್ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಎಚ್ಚರಿಸಿದೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮರಸೂರು ಕೃಷ್ಣಪ್ಪ, ಚಿಂತಾಮಣಿ ನಗರದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಪ್ರತಿಮೆಗೆ ಅಪಮಾನದ ಹಿಂದೆ ಸಚಿವ ಸುಧಾಕರ್ ಹಾಗೂ ರೆಡ್ಡಿ ಸಮಾಜದ ಮಾನವತಾವಾದಿಗಳ ಕೈವಾಡವಿದೆ.  ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಕೆಲವು ವಂಚಕರು, ದಲಿತ ನಾಯಕರನ್ನು ಕಟ್ಟಿಕೊಂಡು ಕೊಳಕು ಬಟ್ಟೆ ಹೊದಿಸಿ ವಿರೋಧಿಸುತ್ತಿದ್ದಾರೆ.  ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ದೂರು ಸಲ್ಲಿಸಲಾಗುವುದು.

ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರೇಣುಕಾ ಬೊಮ್ಮಸಂದ್ರ ಮಾತನಾಡಿ, ಕಳೆದ ಆಗಸ್ಟ್ ನಲ್ಲಿ ಚಿಂತಾಮಣಿ ಪಟ್ಟಣದ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪ್ರತಿಮೆ ಅನಾವರಣಗೊಳಿಸಲಾಗಿತ್ತು.  ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದರೂ ಕೆಲ ಮಾನವ ಹಕ್ಕು ಕಾರ್ಯಕರ್ತರು ಹಾಗೂ ಪಟ್ಟಭದ್ರ ಹಿತಾಸಕ್ತಿಗಳು ಕೊಳಕು ಬಟ್ಟೆ ಸುತ್ತಿ ಅವಮಾನ ಮಾಡಿದ್ದಾರೆ.  ಸುತ್ತಿದ ಬಟ್ಟೆ ತೆಗೆಯುವವರೆಗೆ ಆನೇಕಲ್ ಅಂಬೇಡ್ಕರ್ ಯುವಕ ಸಂಘ ಬೃಹತ್ ಪ್ರತಿಭಟನೆ ನಡೆಸಲಿದೆ.

ಖಜಾಂಚಿ ಮೈಲಾರಪ್ಪ, ಮಂಜುನಾಥ್.  ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಿ.ಭೀಮ ಪುತ್ರಿ ಪವಿತ್ರ, ಮಾನೆ ರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims