ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಬೇಕು
ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಬೇಕು
ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಎಬಿವಿಪಿಯ ಕರ್ನಾಟಕ ಉತ್ತರ ಪ್ರಾಂತದ ಕಾರ್ಯದರ್ಶಿ ಸಚಿನ ಕುಳಗೇರಿ ಹಾಗೂ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಪ್ರವೀಣ ಎಚ ಕೆ ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಮಾಡಿದರು.
ಸಚಿನ ಕುಳಗೇರಿ ಮಾತನಾಡಿ
ಕರ್ನಾಟಕ ರಾಜ್ಯ ಗುಣಮಟ್ಟದ ವಿಶ್ವ ವಿದ್ಯಾಲಯಗಳನ್ನು ಹೊಂದಿರುವ ರಾಜ್ಯ, ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುವ ಕಾರಣಕ್ಕೆ ಬೇರೆ ಬೇರೆ ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕಕ್ಕೆ ಉನ್ನತ ಶಿಕ್ಷಣವನ್ನ ಪಡೆಯಲು ಬರುತ್ತಾರೆ. ಆದರೆ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟದ ಉಪ ಸಮಿತಿಯ ಸಭೆಯಲ್ಲಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಆರ್ಥಿಕ ಕಾರಣ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳ ಕೊರತೆಯ ಕಾರಣವನ್ನು ಕೊಟ್ಟು ವಿವಿಗಳನ್ನೂ ಮುಚ್ಚಲು ನಿರ್ಧರಿಸಿರುವ ಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ.
ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅವರ ಹತ್ತಿರದ ಸ್ಥಳಗಳಲ್ಲಿ ಸಿಗಬೇಕೆಂಬುವುದು ವಿಶ್ವವಿದ್ಯಾಲಯಗಳ ಸ್ಥಾಪನೆಯ ಮೂಲ ಉದ್ದೇಶ.
ಸ್ಥಾಪನೆಯಾಗಿರುವ ಹೊಸ ವಿಶ್ವವಿದ್ಯಾಲಯಗಳಲ್ಲಿ ಕೆಲವೊಂದಿಷ್ಟು ಮೂಲಭೂತ ಸಮಸ್ಯೆಗಳು ಇರುವುದು ನಿಜ. ಆ ಕೊರತೆಯನ್ನು ನೀಗಿಸಬೇಕಾದದ್ದು ಸರ್ಕಾರಗಳ ಮೂಲ ಆದ್ಯತೆ ಆಗಬೇಕು, ಹೊರತು ವಿವಿಗಳನ್ನು ಮುಚ್ಚುವುದು ಪರಿಹಾರವಲ್ಲ, ಸರ್ಕಾರ ಜನಪರ ವಿದ್ಯಾರ್ಥಿಪರ ಕಾರ್ಯ ಮಾಡುವುದೇ ಆದರೆ ಸವಾಲನ್ನು ಸ್ವೀಕರಿಸಿ ಉತ್ತಮ ಗುಣಮಟ್ಟದ ವಿಶ್ವವಿದ್ಯಾಲಯಗಳನ್ನಾಗಿ ನಿರ್ಮಾಣ ಮಾಡಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ.
ಪ್ರವೀಣ ಎಚ್ ಕೆ ಮಾತನಾಡಿ ಸಾಮಾನ್ಯವಾಗಿ 10,000 ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯಗಳು ಇರಬೇಕೆಂಬುವುದು ಆದರ್ಶವಾದ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಅತಂತ್ರಗೊಳಿಸಬಾರದು, ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವ ರಾಜ್ಯ ಸರ್ಕಾರ ಎರಡು ವರ್ಷ ಕಳೆದರೂ ಸಹಿತ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಕಿಂಚಿತ್ತು ಗಮನಕೊಡದೆ ಈಗ ಮೂಲಭೂತ ಸೌಲಭ್ಯಗಳ ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ,ಶಿಕ್ಷಣ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.
ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದರು.
ಸರ್ಕಾರಕ್ಕೆ ಎಬಿವಿಪಿಯ ಪ್ರಶ್ನೆಗಳು.
1) ಯಾವ ಶಿಕ್ಷಣ ತಜ್ಞರ ಸಲಹೆಯನ್ನು ತೆಗೆದುಕೊಂಡು ವಿವಿಗಳನ್ನು ಮುಚ್ಚಲು ಮುಂದಾಗಿದ್ದೀರಿ?
2) ವಿಶ್ವವಿದ್ಯಾಲಯಗಳಿಗೆ ಆರ್ಥಿಕ ನೆರವು ನೀಡುವಷ್ಟು ಅನುದಾನ ಸರಕಾರದ ಹತ್ತಿರ ಇಲ್ಲವೇ?
3)ಗ್ರಾಮೀಣ ಭಾಗದ ಬಡ ವಿಧ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬಾರದೆ?
4) ವಿಶ್ವ ವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯ ನೀಡುವುದು ಯಾರ ಕರ್ತವ್ಯ?
ಪತ್ರಿಕಾ ಗೋಷ್ಟಿಯಲ್ಲಿ ರಾಜ್ಯ ಸಹ ಕಾರ್ಯದರ್ಶಿ ದಿವ್ಯಾ , ಮಹಾನಗರ ಸಹ ಕಾರ್ಯದರ್ಶಿ ಯಶವಂತ, ಮಾಧ್ಯಮ ಸಂಚಾಲಕಿ ಪ್ರೀತಿ ಉಪಸ್ಥಿತರಿದ್ದರು.
Comments
Post a Comment