ಆರೋಪಕ್ಕೆ ದಾಖಲೆ ಕೊಡಿ ಎಂದು ಸವಾಲು ಹಾಕಿದ ಅನ್ವರ್ ಬಾಷಾ

 ಆರೋಪಕ್ಕೆ ದಾಖಲೆ ಕೊಡಿ ಎಂದು ಸವಾಲು ಹಾಕಿದ ಅನ್ವರ್ ಬಾಷಾ 

ಬೆಂಗಳೂರು :ವಖ್ಫ್ ಬೋರ್ಡ್ ಚುನಾವಣೆ ಹಾಗೂ ಚಿತ್ರದುರ್ಗ ಅಗಸನಕಲ್ಲು ಸರ್ವೆ ನಂಬರ್ 25 ರ ಜಮೀನು ಒತ್ತುವರಿ ಆರೋಪ ಸಂಬಂಧ ಅಜ್ಮಲ್  ಅಹಮದ್, ಮನ್ಸೂರ್, ದಾದಾಪೀರ್, ಸೈಫುಲ್ಲಾ ಅವರು ಮಾಡಿರುವ ಆರೋಪಕ್ಕೆ ಸಾಕ್ಷಿ ಕೊಟ್ಟರೆ ಒಂದು ನಿಮಿಷದಲ್ಲಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಸವಾಲು ಹಾಕಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ನಿರಂತರವಾಗಿ ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗುತ್ತಿದ್ದು, ರಾಜಕೀಯ ವಾಗಿ ಎದುರಿಸಲು ಆಗದೆ ಸುಳ್ಳನ್ನು ಪದೇ ಪದೇ ಹೇಳಿ ಸತ್ಯ ಎಂದು ಬಿಂಬಿಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

ವಖ್ಫ್ ಬೋರ್ಡ್ ಚುನಾವಣೆ ಕಾನೂನು ಬದ್ಧವಾಗಿ ನಡೆದಿದೆ. ಏನಾದರೂ ತಕರಾರು ಇದ್ದಲ್ಲಿ ನ್ಯಾಯಾಲಯಕ್ಕೆ ಹೋಗಬಹುದಿತ್ತು.  ಚುನಾವಣೆ ಗೆ ಮುಂಚೆ ಪ್ರೆಶ್ನೆ ಮಾಡಬಹುದಿತ್ತು. ಎಲ್ಲ ಪ್ರಕ್ರಿಯೆ ಮುಗಿದ ಮೇಲೆ ಇದೀಗ ಪತ್ರಿಕಾಗೋಷ್ಠಿ ನಡೆಸಿ ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಗಸನಕಲ್ಲು ಸರ್ವೆ ನಂಬರ್ 25 ರ ವಿಚಾರದಲ್ಲಿ ಎಲ್ಲ ರೀತಿಯ ತನಿಖೆ ನಡೆದು ಒತ್ತುವರಿ ಆಗಿಲ್ಲ ಎಂದು ಅಧಿಕಾರಿಗಳೇ ಹೇಳಿದ್ದಾರೆ. ಆದರೂ ಪದೇ ಪದೇ ಒತ್ತುವರಿ ಎಂದು ಹೇಳಿ ದಿಕ್ಕು ತಪ್ಪಿಸಲಾಗುತ್ತಿದೆ. ಒತ್ತುವರಿ ಬಗ್ಗೆ ಒಂದೇ ಒಂದು ದಾಖಲೆ ಕೊಟ್ಟರೂ ಒಂದು ಕ್ಷಣವೂ ಯಾವುದೇ ಅಧಿಕಾರ ದಲ್ಲಿ ಇರುವುದಿಲ್ಲ. ಆರೋಪ ಮಾಡುವವರು ದಾಖಲೆ ಕೊಡಲಿ. ಈ ಬಗ್ಗೆ ಯಾವುದೇ ರೀತಿಯ ಬಹಿರಂಗ ಚರ್ಚೆಗೆ ಸಿದ್ದ ಎಂದು ಹೇಳಿದ್ದಾರೆ.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"