ಬೆಂಗಳೂರು: ಕರ್ನಾಟಕ ರಾಜ್ಯದ ನೂತನ 09 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಟ್ಟು, ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಹೆಚ್ಚಿನ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳನ್ನು
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ 09 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಟ್ಟು, ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಹೆಚ್ಚಿನ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳನ್ನು ಪ್ರತಿಭಟನೆ
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ 09 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಟ್ಟು, ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಹೆಚ್ಚಿನ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳಬೇಕೆಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ನೂರಾರು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ತಕ್ಷಣ ಉತ್ತರ ನೀಡಬೇಕೆಂದು ಆಗ್ರಹಿಸಿದರು, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನಲೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧನ ಮಾಡಿದರು.
ಎಬಿವಿಪಿಯ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ ಕಳೆದ ಹಲವಾರು ದಿನಗಳಿಂದ ಎಬಿವಿಪಿ ನೇತೃತ್ವದಲ್ಲಿ ರಾಜ್ಯದ್ಯಂತ ಹಲವಾರು ರೀತಿಯ ಪ್ರತಿಭಟನೆ ಮಾಡಿ ವಿಶ್ವವಿದ್ಯಾಲಯಗಳನ್ನು ಮುಚ್ಚದಂತೆ ಆಗ್ರಹಿಸಿದರು ಸಹಿತ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಮೊಂಡುತನವನ್ನು ತೋರಿಸುತ್ತಿದೆ, ಯಾವುದೇ ಕಾರಣಕ್ಕು ಎಬಿವಿಪಿ ಹೋರಾಟವನ್ನು ನಿಲ್ಲಿಸುವುದಿಲ್ಲ ವಿಶ್ವವಿದ್ಯಾಲಯಗಳ್ನ ಮುಚ್ಚುವ ನಿರ್ಧಾರವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸಿದರು.
ಭಾರತ ದೇಶದ ದೀನ/ದಲಿತ, ಹಿಂದುಳಿದ, ಮಹಿಳಾ ಹಾಗೂ ಗ್ರಾಮೀಣ ಪ್ರದೇಶದ ಯುವ ಜನರು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಸದಾಶಯದೊಂದಿಗೆ ಗಮನಿಸುವುದಾದರೆ, ಸ್ವಾತಂತ್ರ್ಯ ನಂತರದ ಅಭಿವೃದ್ಧಿಶೀಲ-ಸಶಕ್ತ ಪ್ರಜಾಪ್ರಭುತ್ವ ಹೊಂದಿದ ಭಾರತದ ನಿರ್ಮಾಣದಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳು ಅಪಾರವಾದ ಕೊಡುಗೆಯನ್ನು ನೀಡಿರುವುದು ನಮಗೆಲ್ಲರಿಗೂ ತಿಳಿದಿರುವ ಸಂಗತಿ. ಈ ದೇಶದ ಪ್ರತಿಭಾನ್ವಿತ ಪ್ರಜೆಗಳೆಲ್ಲರೂ ಯಾವುದೇ ಜಾತಿ-ಮತ-ಪಂಥ ಪ್ರದೇಶದ ಭೇದವಿಲ್ಲದೆ ಸಾರ್ವಜನಿಕ ಶಿಕ್ಷಣವನ್ನು ಪಡೆಯಲು ಸಾಧ್ಯವಾಗಿದ್ದು ಇದೇ ಸಾರ್ವಜನಿಕ ವಿವಿಗಳಿಂದ ಎಂಬ ಸತ್ಯವನ್ನು ಪ್ರತ್ಯಕ್ಷ ಸಾಕ್ಷಿಕರಿಸುತ್ತಾ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಅರ್ಥತ್ ವಿವಿಗಳನ್ನು ಸದೃಢಗೊಳಿಸಬೇಕೆಂಬ ನಿಲುವುಗಳನ್ನು ಚುನಾಯಿತ ಸರ್ಕಾರಗಳು ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದರು.
ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತದ ರಾಜ್ಯಕಾರ್ಯದರ್ಶಿ ಪ್ರವೀಣ ಕೆ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 09 ವಿಶ್ವವಿದ್ಯಾಲಯಗಳು ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿನ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣವನ್ನು ಹೆಚ್ಚಿಸಿ ಬಡ- ಪ್ರತಿಭಾನ್ವಿತ ಹಾಗೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಹೆಚ್ಚು ಮಹತ್ವವನ್ನು ಪಡೆದುಕೊಂಡಿವೆ. ಇಂತಹ ವಿಶ್ವವಿದ್ಯಾಲಯಗಳನ್ನು ಆರ್ಥಿಕ ನೆಪವೇಳಿ ಮುಚ್ಚಲು ಹೊರಟಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ.
ಈ ಎಲ್ಲಾ 09 ವಿಶ್ವ ವಿದ್ಯಾಲಯಗಳು ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಂದ ಭಿನ್ನವಾಗಿ ವ್ಯಾಪಕವಾದ ಡಿಜಿಟಲ್ ತಂತ್ರಜ್ಞಾನದ ಬಳಕೆ ಸಾಧ್ಯವಾಗಿಸಿ ಕನಿಷ್ಠ ಆಡಳಿತ-ಗರಿಷ್ಠ ಶಿಕ್ಷಣ ನೀಡುವ ಶೈಕ್ಷಣಿಕ ಕೇಂದ್ರಗಳಾಗಿ, ಅಯಾ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಈ ನಿಟ್ಟಿನಲ್ಲಿ ಗಮನಿಸುವುದಾದರೆ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಹೆಚ್ಚಳದಿಂದ ಹಿಂದುಳಿದ ಜಿಲ್ಲೆಗಳ/ ಗ್ರಾಮೀಣ ಪ್ರದೇಶದ ಎಷ್ಟೋ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೈಪೋಟಿಯ ಕಾರಣಕ್ಕಾಗಿ ಈಗಾಗಲೇ ಅಸ್ತಿತ್ವದಲ್ಲಿರುವ ಸರ್ಕಾರಿ ವಿವಿಗಳಲ್ಲಿ ಉನ್ನತ ಶಿಕ್ಷಣ ಪಡೆಯುವುದು ಕಷ್ಟ ಸಾಧ್ಯವಾಗಿದೆ. ಅಷ್ಟೇ ಅಲ್ಲದೆ ಈ 09 ವಿಶ್ವವಿದ್ಯಾಲಯಗಳ ಯೋಜಿತ ಅಭಿವೃದ್ಧಿಗೆ ನೂರಾರು ಎಕರೆ ಸ್ಥಳಾವಕಾಶವಿದೆ ಹಾಗೂ ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ವಿವಿಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಆದ್ದರಿಂದ ಸರ್ಕಾರ ಸಂಭಾವ್ಯ ಆರ್ಥಿಕ ಹೊರೆಯ ನೆಪ ಮಾಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಈ ನವಜಾತ ವಿಶ್ವವಿದ್ಯಾಲಯಗಳ ಕುತ್ತಿಗೆ ಹಿಸುಕುವುದನ್ನು ವಿದ್ಯಾರ್ಥಿ ಪರಿಷತ್ ತೀವ್ರವಾಗಿ ವಿರೋಧಿಸುತ್ತದೆ ಎಂದರು.
ಎಬಿವಿಪಿಯ ಕರ್ನಾಟಕ ಉತ್ತರ ಪ್ರಾಂತದ ಪ್ರಾಂತ ಸಂಘಟನಾ ಕಾರ್ಯದರ್ಶಿಯಾದ ಪೃಥ್ವಿಕುಮಾರ ಮಾತನಾಡಿ ಈ 09 ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿನ ವಿದ್ಯಾರ್ಥಿಗಳ ಹಿತ ಹಾಗೂ ಉನ್ನತ ಶಿಕ್ಷಣಕ್ಕೆ ವ್ಯಾಪಕ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಕರ್ನಾಟಕ ಘನ ಸರ್ಕಾರವು ಈ ಪ್ರಸಕ್ತ ಬಜೆಟ್ ನಲ್ಲಿಯೇ ಅನುದಾನವನ್ನು ಘೋಷಣೆ ಮಾಡಿ ವಿವಿಗಳಿಗೆ ಕಾಯಕಲ್ಪ ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದರು.
ಪ್ರತಿಭಟನೆಯಲ್ಲಿ ಗಂಗಾಧರ ಹಂಜಗಿ, ವೆಂಕಟೇಶ ಡಾಂಗೆ, ವಿಜಯ ಗೌಡರ, ಪ್ರೀತಿ ವಿ ಆರಾಧ್ಯ, ದಿವ್ಯ, ಅಮೂಲ್ಯ ಇತರು ಉಪಸ್ಥಿತರಿದ್ದರು.
Comments
Post a Comment