ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ರಿಂದ ವಿವಿಧ ಹಂತಗಳಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವ ಬಗ್ಗೆ.

  ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ರಿಂದ ವಿವಿಧ ಹಂತಗಳಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವ ಬಗ್ಗೆ.


ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು/ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಈ ಕೆಳಕಂಡ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ.

1. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ. ಎಸ್.ಟಿ. ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡುವುದು.

2. ನಗದು ರಹಿತ ಚಿಕಿತ್ಸೆಗಾಗಿ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸುವುದು.

3. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು.

4. ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡುವುದು.

5. ಹೆಚ್ಚುವರಿ ಕಾರ್ಯಾಭಾರ ಇರುವುದರಿಂದ 10% ವಿಶೇಷ ಭತ್ಯೆ ಮಂಜೂರಾತಿ.

ಈ ಮೇಲಿನ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಘನ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ ವಸತಿ ಶಾಲೆಗಳ ನೌಕರರ ಸಂಘ(ರಿ), ಬೆಂಗಳೂರು, ವತಿಯಿಂದ ದಿ:26.05.2025 ರಿಂದ 28.05.2025 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂವಿಧಾನಾತ್ಮಕ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.

ದಿ:28.05.2025 ರೊಳಗೆ ನಮ್ಮ ಈ ಬೇಡಿಕೆಗಳು ಈಡೇರದಿದ್ದರೆ ಈ ಕೆಳಕಂಡಂತೆ ಜಿಲ್ಲಾ ಹಂತದಲ್ಲಿ ಸತ್ಯಾಗ್ರಹವನ್ನು ಕೈಗೊಳ್ಳಲಾಗುವುದು.

1. ದಿ:29.05.2025 ರಂದು ವಸತಿ ಶಾಲೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವುದು.

. ದಿ:30.05.2025 ರಂದು ತರಗತಿಗಳ ಬಹಿಷ್ಕಾರ ಮಾಡಿ ಅಸಹಕಾರ ವ್ಯಕ್ತಪಡಿಸುವುದು.

2 3. ದಿ:31.05.2025 ರಂದು ಪಾದಯಾತ್ರೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದು.

4. ದಿ:02.06.2025 ರಿಂದ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಅಥವಾ ವಸತಿ ಶಾಲೆಗಳ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸುವುದು.

ಈ ಮೇಲೆ ತಿಳಿಸಿದಂತೆ ವಿವಿಧ ಹಂತಗಳಲ್ಲಿ ಸಂವಿಧಾನಾತ್ಮಕವಾಗಿ ಧರಣಿ ಸತ್ಯಾಗ್ರಹವನ್ನು ಅನಿರ್ದಿಷ್ಟಾವಧಿವರೆಗೆ ಹಮ್ಮಿಕೊಳ್ಳಲಾಗುವುದು ಎಂಬ ವರದಿಯನ್ನು ತಮ್ಮ ಮಾಧ್ಯಮಗಳಲ್ಲಿ ಉಚಿತವಾಗಿ ಪ್ರಕಟಿಸಬೇಕಾಗಿ ವಿನಂತಿ.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims