ಕರ್ನಾಟಕ ರಾಜ್ಯ ಮಡಿವಾಳರ ಸಂಘದಿಂದ 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
ಕರ್ನಾಟಕ ರಾಜ್ಯ ಮಡಿವಾಳರ ಸಂಘದಿಂದ 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
ಕರ್ನಾಟಕ ರಾಜ್ಯ ಮಡಿವಾಳರ ಸಂಘದಿಂದ 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಮಡಿವಾಳ ಜನಾಂಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಜನಾಂಗದ ವಿದ್ಯಾರ್ಥಿಗಳನ್ನು ಕಾರ್ಯಕ್ರಮ ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಮೇಲ್ಕಂಡಂತೆ ಅರ್ಹರಿರುವ ರಾಜ್ಯದ ಎಲ್ಲಾ ಭಾಗದ ಮಡಿವಾಳ ವಿದ್ಯಾರ್ಥಿಗಳನ್ನು ಗುರುತಿಸಿ, ಜಿಲ್ಲಾ ಹಾಗೂ ತಾಲ್ಲೂಕು ಸಂಘಗಳ ಮೂಲಕ ನೇರವಾಗಿ ಅಥವಾ ರಾಜ್ಯಸಂಘಕ್ಕೆ ತಮ್ಮ ಎಸ್.ಎಸ್.ಎಲ್.ಸಿ.ಯಲ್ಲಿ 70% ಅಂಕ ಮತ್ತು ದ್ವಿತೀಯ ಪಿಯುಸಿಯಲ್ಲಿ 90% ಕ್ಕಿಂತ ಅಧಿಕ ಅಂಕಗಳಿಸಿ ಉತ್ತೀರ್ಣರಾಗಿರುವವರು ತಮ್ಮ 2025ರ ಅಂಕಪಟ್ಟಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಮತ್ತು ಸ್ವಂತ ವಿಳಾಸ, ಮೊಬೈಲ್ ಸಂಖ್ಯೆ, ಈ ಎಲ್ಲಾ ಮಾಹಿತಿಗಳನ್ನು ಸಂಘದ ಕಛೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಕರ್ನಾಟಕ ರಾಜ್ಯ ಮಡಿವಾಳರ ಸಂಘ(ರಿ), ನಂ.7, ಶಿರೂರ್ ಪಾರ್ಕ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು-560020 ಇಲ್ಲಿಗೆ ದಿನಾಂಕ: 30/07/2025 ರ ಒಳಗಾಗಿ ಕಳಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸಂಘದ ದೂರವಾಣಿ ಸಂಖ್ಯೆ: 080-23460946 ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಆರ್. ಪ್ರಕಾಶ್-ಮೊಬೈಲ್ ಸಂಖ್ಯೆ: 9611664485. ನೌಕರ ಸಮಿತಿಯ ಉಪಚೇರ್ಮನ್-ಶಿವಕುಮಾರ್ ಇ.ಹೆಚ್.: 9980408392, ಪ್ರಧಾನ ಸಂಚಾಲಕರು ಪ್ರಭಾಕರ್ ಎ.: 9945421124 ಸಂಪರ್ಕಿಸಬೇಕಾಗಿ ಈ ಪತ್ರಿಕಾಗೋಷ್ಠಿಯ ಮೂಲಕ ತಿಳಿಯಪಡಿಸುತ್ತಿದ್ದೇವೆ. ನಿಮ್ಮ ಮಾಧ್ಯಮಗಳ ಮೂಲಕ ನಮ್ಮ ಸಮಾಜದ ಬಂಧುಗಳಿಗೆ ಆದಷ್ಟು ಬೇಗ ತಲುಪಿಸಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತಿದ್ದೇವೆ.

Comments
Post a Comment