ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

 ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ 

ಬೆಂಗಳೂರು, 15 ಅಕ್ಟೋಬರ್ 2025: ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ಼ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ 'ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025' ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್ ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ನಿಮ್ಮ ನೆಚ್ಚಿನ ಜೀ಼ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಮತ್ತು ನಿರೂಪಕಿ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ. 

ಈ ವರುಷದ 'ಜೀ಼ ಕನ್ನಡ ಕುಟುಂಬ ಅವಾರ್ಡ್ಸ್ ನಲ್ಲಿ ಫೇವರಿಟ್ ನಟ, ಫೇವರಿಟ್ ನಟಿ, ಫೇವರಿಟ್ ಜೋಡಿ, ಫೇವರಿಟ್ ಸೀರಿಯಲ್, ಫೇವರಿಟ್ ರಿಯಾಲಿಟಿ ಶೋ ಮತ್ತು ಫೇವರಿಟ್ ನಿರೂಪಕ/ನಿರೂಪಕಿ ಅನ್ನುವ ಪ್ರಮುಖ 6 ಕೆಟಗರಿಗಳಿರಲಿವೆ. ಈ ಆರು ಪ್ರಮುಖ ವಿಭಾಗಗಳ ಜೊತೆಗೆ ಇನ್ನೂ ಅನೇಕ ವಿಭಾಗಗಳಲ್ಲಿ ವಿಜೇತರ ಘೋಷಣೆಯೂ ಇರಲಿದೆ. ಇನ್ನು ಈ ಬಾರಿಯ ಜೀ಼ ಕನ್ನಡ ಕುಟುಂಬ ಅವಾರ್ಡ್ಸ್ ಅಮೋಘ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಕನ್ನಡ ಚಲನಚಿತ್ರ ತಾರೆಯರು ಹಾಗು ಕಿರುತೆರೆ ಕಲಾವಿದರು ಜೊತೆಯಾಗಿ ಸೇರಿ ಸಂಭ್ರಮಿಸಿದ್ದು ಇದರ ಮತ್ತೊಂದು ಆಕರ್ಷಣೆ. ನೆಚ್ಚಿನ ತಾರೆಯರು ಅವರ ಅವಿಸ್ಮರಣೀಯ ಸುಂದರ ಮತ್ತು ನೋವಿನ ಕ್ಷಣಗಳನ್ನು ಮೆಲುಕು ಹಾಕುತ್ತಾ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗುವದರಲ್ಲಿ ಎರಡು ಮಾತಿಲ್ಲ.

ಜೀ಼ ಕನ್ನಡ  ಅವಾರ್ಡ್ 2025 ರಲ್ಲಿ ಚಂದನವನದ ಡಿವೈನ್ ಸ್ಟಾರ್ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಮತ್ತು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದದ್ದು ಈ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು. ಜೀ಼ ಕನ್ನಡ ಅವಾರ್ಡ್ ನಲ್ಲಿ ವಿಶೇಷವಾಗಿ “ವೀಕೆಂಡ್ ವಿತ್ ರಮೇಶ್ ಮಿನಿಯೇಚರ್” ಕೂಡ ಇರಲಿದ್ದು, ರಿಷಬ್ ಶೆಟ್ಟಿ ಮತ್ತು ಹಿರಿಯ ನಟ ರಮೇಶ್ ಅವರ ಮಾತುಕತೆ ಈ ಕಾರ್ಯಕ್ರಮದ ಮತ್ತೊಂದು ಹೈಲೈಟ್ ಆಗಿತ್ತು. 

ಇನ್ನು ಇದರ ಬಗ್ಗೆ ಮಾತನಾಡಿದ ಜೀ಼ ಕನ್ನಡ ಮತ್ತು ಕನ್ನಡ ಜೀ಼5 ನ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಅವರು "ಕನ್ನಡ ಟೆಲಿವಿಷನ್ ಕುಟುಂಬದ ಪ್ರತಿಭೆ, ಸೃಜನಶೀಲತೆ ಮತ್ತು ಅದ್ಭುತ ಆತ್ಮಸ್ಫೂರ್ತಿಯ ಆಚರಣೆಯೇ ಕುಟುಂಬ ಅವಾರ್ಡ್ಸ್. ಇನ್ನು ಜೀ಼ ಕನ್ನಡ 19ವರುಷ ಪೂರೈಸಿದ ಈ ಶುಭ ಸಂದರ್ಭದಲ್ಲಿ ವೀಕ್ಷಕರಿಗೆ ಇನ್ನಷ್ಟು ಮನರಂಜನೆ ಕೊಡೋದು ನಮ್ಮ ಮುಖ್ಯ ಗುರಿ ಆಗಿತ್ತು. ಅದಕ್ಕೆ ಬದ್ಧವಾಗಿ ನಾವು ಈ ವರುಷ 'ನಾ ನಿನ್ನ ಬಿಡಲಾರೆ', 'ಕರ್ಣ' ಮತ್ತು 'ಶ್ರೀ ರಾಘವೇಂದ್ರ ಮಹಾತ್ಮೆ' ಎಂಬ ಪ್ರಸಿದ್ಧ ಧಾರಾವಾಹಿಗಳ ಜೊತೆಗೆ 'ನಾವು ನಮ್ಮವರು' ಎಂಬ ವಿಭಿನ್ನ ರಿಯಾಲಿಟಿ ಶೋ ವನ್ನು ಜನರ ಮುಂದಿಟ್ಟಿದ್ದೇವೆ. ಇನ್ನು ನಮ್ಮ ವೀಕ್ಷಕರು ಈ ಎಲ್ಲಾ ಕಾರ್ಯಕ್ರಮಗಳನ್ನು ಮನಸಾರೆ ಮೆಚ್ಚಿದ್ದು ನಮ್ಮ ಹುರುಪನ್ನು ಮತ್ತಷ್ಟು ಹೆಚ್ಚಿಸಿದೆ. ಟೆಲಿವಿಷನ್ ಜೊತೆಗೆ OTT ಪ್ಲಾಟ್‌ಫಾರ್ಮ್ ಕನ್ನಡ ZEE5  “ನಮ್ಮ ಭಾಷೆ, ನಮ್ಮ ಕಥೆಗಳು” ಮೂಲಕ ಕನ್ನಡದ ಕಥೆಗಳಿಗೆ ಜೀವ ತುಂಬುವ ಕೆಲಸವನ್ನು ಮುಂದುವರೆಸಿದೆ. ಮತ್ತೊಂದೆಡೆ ಮೈಕ್ರೋ-ಸರಣಿ ಅಪ್ಲಿಕೇಶನ್ ಬುಲೆಟ್ ಇಂದಿನ ಪೀಳಿಗೆಗಳಿಗೆ ಕಥೆ ಹೇಳುವ ಕಲೆಗೆ ಹೊಸ ಅರ್ಥ ನೀಡುತ್ತಿದೆ. ಇನ್ನು ನಮಗೆ ವೀಕ್ಷಕರು ನೀಡುವ ಸಪೋರ್ಟ್ ಮತ್ತು ಪ್ರೀತಿ ಅಭೂತಪೂರ್ಣ" ಎಂದರು. 

ಯಾರು ಯಾವ ಪ್ರಶಸ್ತಿಗೆ ಭಾಜೀನರಾದರು, ಯಾರು ಯಾವ ಹಾಡಿಗೆ ನೃತ್ಯ ಮಾಡಿದರು, ಯಾರು ಯಾವ ಉಡುಗೆಯಲ್ಲಿ ಮಿಂಚಿದರು ಹೀಗೆ ಮತ್ತಷ್ಟು ಇಂಟೆರೆಸ್ಟಿಂಗ್ ವಿಷಯಗಳನ್ನು ತಿಳಿದುಕೊಳ್ಳಲು ಮತ್ತು ನಗು, ತರ್ಲೆ, ಅಳು, ನೋವು, ನಲಿವು ಮತ್ತು ಇನ್ನಷ್ಟು ಭಾವನೆಗಳ ಸಮ್ಮಿಲನವನ್ನು ಕಣ್ತುಂಬಿಕೊಳ್ಳಲು ನೋಡಿ 'ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025!

ಜನಮೆಚ್ಚಿದ ತಾರೆಗಳಿಗೆ ಪ್ರಶಸ್ತಿಯ ಗೌರವ ಇದೇ 17, 18 ಮತ್ತು 19 ರಂದು ಸಂಜೆ 6:30 ರಿಂದ ನಿಮ್ಮ ನೆಚ್ಚಿನ ಜೀ಼ ಕನ್ನಡ ವಾಹಿನಿಯಲ್ಲಿ ನೋಡಲು ಮರೆಯದಿರಿ!

ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕರಾದ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮತ್ತು ನಿರೂಪಕಿ ಅನುಶ್ರೀ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.



Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims