ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"
ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"
ಕರ್ನಾಟಕ ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಸಿಬಿಎಸ್ ಇ, ಐಸಿಎಸ್‌ಇ ಹಾಗೂ ಇತರೆ ರಾಜ್ಯಗಳಲ್ಲಿ ಎಸ್‌ಎಸ್ಎಲ್ಸಿ ಪರೀಕ್ಷೆಯ ಉತ್ತೀರ್ಣತೆಯ ಮಾನದಂಡದಂತೆ ರಾಜ್ಯ ಪಠ್ಯಕ್ರಮದ ಶಾಲೆಗಳ ಎಸ್‌ಎಸ್ಎಲ್‌ಸಿ ಉತೀರ್ಣತೆಯ ಮಾನದಂಡವನ್ನು ಆಂತರಿಕ ಅಂಕಗಳು ಸೇರಿದಂತೆ ಶೇ 33 ಅಂಕಗಳಿಗೆ ಉತ್ತೀರ್ಣತೆಯ ಮಾನದಂಡವನ್ನು ಅನುಸರಿಸಿ ಉತ್ತೀರ್ಣರಾಗಲು ಸರ್ಕಾರದ ಆದೇಶ ಮಾಡಿದ ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ, ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್‌ರವರಿಗೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರಿಗೆ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಮೇಡಂ ರವರಿಗೆ, ವಿಶೇಷವಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್ ಮೇಡಂ ರವರಿಗೆ ಹಾಗೂ ಇದಕ್ಕೆ ಸಹಕರಿಸಿದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರುಗಳಿಗೆ ಹಾಗೂ ಮಾನ್ಯ ಆಯುಕ್ತರುಗಳಿಗೆ ಹಾಗೂ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳ ವೃಂದಕ್ಕೆ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.
ದಿನಾಂಕ : 05-11-2025ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಸಿದ್ದಬಸಪ್ಪ ಬಿ ರವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೇವರಾಜೇಗೌಡರವರು. ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಸನಗೌಡ ಕೋಣಿ ರವರು ಭೇಟಿ ಮಾಡಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲಾಯಿತು.
ಚರ್ಚಿಸಿದ ಪ್ರಮುಖ ವಿಷಯಗಳು
> ಅನುದಾನಿತ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ನೌಕರರಿಗೆ ಸರ್ಕಾರಿ ನೌಕರರಂತೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವುದು.
> ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿಗೆ ಪ್ರಕ್ರಿಯೆಯನ್ನು ಶೀಘ್ರವಾಗಿ ಆರಂಭಿಸಿವುದು.
> ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿಗೆ ಶೀಘ್ರವಾಗಿ ನಾಲ್ಕು ವಿಭಾಗಗಳಲ್ಲಿ ಪ್ರಕ್ರಿಯೆ ಆರಂಭಿಸಿವುದು.
> ಖಾಸಗಿ ಅನುದಾನಿತ ನೌಕರರಿಗೆ ಹಬ್ಬದ ಮುಂಗಡವನ್ನು ಸರ್ಕಾರಿ ನೌಕರರಿಗೆ ಇರುವಂತೆ 25000 ರೂಗಳಿಗೆ ಹೆಚ್ಚಿಸುವುದು.
> ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು
ಮೇಲ್ಕಂಡ ವಿಷಯವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರೊಂದಿಗೆ ಚರ್ಚಿಸಿದಾಗ ಈ ಎಲ್ಲಾ ಬೇಡಿಕೆಗಳನ್ನು ಶೀಘ್ರವಾಗಿ ಕ್ರಮಕೈಗೊಳ್ಳಲು

Comments
Post a Comment