ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಂದ 26 ಕೋಟಿ ಷೇರು ಬಂಡವಾಳ ಸಂಗ್ರಹ; ನೂತನ ಅಧ್ಯಕ್ಷ ಸದಾಶಿವ ರೆಡ್ಡಿ.
ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಂದ 26 ಕೋಟಿ ಷೇರು ಬಂಡವಾಳ ಸಂಗ್ರಹ; ನೂತನ ಅಧ್ಯಕ್ಷ ಸದಾಶಿವ ರೆಡ್ಡಿ.
ಬೆಂಗಳೂರು ಫೆಬ್ರವರಿ 4; ಬೆಂಗಳೂರು ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲಿ ಒಂದಾದ ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ಸುಮಾರು 11 ಸಾವಿರ ಸದಸ್ಯರನ್ನು ಹೊಂದಿದ್ದು,26 ಕೋಟಿ ಷೇರು ಬಂಡವಾಳ ಹೊಂದಿದೆ ಎಂದು ನೂತನ ಅಧ್ಯಕ್ಷ ಸದಾಶಿವ ರೆಡ್ಡಿ, ಉಪಾಧ್ಯಕ್ಷ ಸಿ ಚೆನ್ನಾರೆಡ್ಡಿ ತಿಳಿಸಿದರು.
ಪ್ರೆಸ್ ಕ್ಲಬ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು,ಜನವರಿ 2026ರ ಅಂತ್ಯಕ್ಕೆ ಬ್ಯಾಂಕಿನ ಠೇವಣಿ 478 ಕೋಟಿ ರೂಪಾಯಿಗಳಷ್ಟಿದ್ದು,336 ಕೋಟಿ ರೂಪಾಯಿ ಸಾಲ ವಿತರಿಸಲಾಗಿದೆ. ಬ್ಯಾಂಕಿನ ಒಟ್ಟು ಹೂಡಿಕೆಗಳು 204 ಕೋಟಿ ರೂಪಾಯಿಗಳಷ್ಟಿದ್ದು, ಇದರಲ್ಲಿ ಶೇ.68% ರಷ್ಟನ್ನು ಸರ್ಕಾರಿ ಹೂಡಿಕೆಗಳಲ್ಲಿ ತೊಡಗಿಸಲಾಗಿದೆ. ಬ್ಯಾಂಕಿನ ಒಟ್ಟಾರೆ 814 ಕೋಟಿ ರೂಪಾಯಿಗಳಷ್ಟು ವ್ಯವಹಾರ ಹೊಂದಿದೆ ಹಾಗೂ 2024-25 ನೇ ಸಾಲಿನಲ್ಲಿ 8.07 ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿದೆ ಎಂದರು.
ಮಾರ್ಚ್ 2025ರ ಅಂತ್ಯಕ್ಕೆ ಬ್ಯಾಂಕಿನ ಒಟ್ಟು ಅನುತ್ಪಾದಕ ಆಸ್ತಿಯ ಪ್ರಮಾಣ ಶೇ.1.25 ರಷ್ಟಿದ್ದು ಹಾಗೂ ಸತತ ಮೂರು ವರ್ಷಗಳಿಂದ ಶೂನ್ಯ ನಿವ್ವಳ ನಿಷ್ಕ್ರಿಯ ಆಸ್ತಿಗಳನ್ನು ಹೊಂದಿದೆ.
Phonepay, Google pay, POS ಇ- ಕಾಮರ್ಸ್‌ಗಳೊಂದಿಗೆ ಎಲ್ಲಾ ರೀತಿಯ ಡಿಜಿಟಲ್ ಪೇಮೆಂಟ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಲ್ಲದೇ ಬ್ಯಾಂಕ್ RTGS/NEFT, ATM ಕಾರ್ಡ್, ಲಾಕರ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರಾಜ್ಯದ ಪ್ರಮುಖ ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು.
ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ ಇದರ ಆಡಳಿತ ಮಂಡಲಿಳಿಗೆ ಮುಂದಿನ 2026-2031ರ ಐದು ವರ್ಷಗಳ ಅವಧಿಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 13 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಸದಾಶಿವ ರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಸಿ. ಚೆನ್ನಾ ರೆಡ್ಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಆಡಳಿತ ಮಂಡಳಿಯು ಸತತವಾಗಿ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದರು.
ಈಗಾಗಲೇ ಬ್ಯಾಂಕಿನ ಎಂಟು ಶಾಖೆಗಳು ವಿ.ವಿ.ಪುರಂ, ಬೊಮ್ಮನಹಳ್ಳಿ, ಮಾರತ್ತಹಳ್ಳಿ, ರಘುವನಹಳ್ಳಿ, ಅರೆಕೆರೆ, ಮರಸೂರು, ಹೆಸರಘಟ್ಟ ಮತ್ತು ಆಮೃತಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಗಡಿ ಭಾಗದ ಗ್ರಾಮೀಣ ಪ್ರದೇಶದಲ್ಲಿ ನೂತನ ಶಾಖೆಯನ್ನು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ತಿರುಮಣಿ ಗ್ರಾಮದಲ್ಲಿ ಫೆಬ್ರವರಿ ಆರರಂದು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥಾಪಕ ಸದಸ್ಯರಾದ ಆರ್.ಪಿ.ಎಸ್ ರೆಡ್ಡಿ, ನೂತನವಾಗಿ ಆಯ್ಕೆಗೊಂಡ ಪಿ.ಎನ್.ನಂಜಾ ರೆಡ್ಡಿ, ಎಂ.ವೆಂಕಟಸ್ವಾಮಿ,ಬ್ಯಾಂಕ್ ನ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುಮಾರ್ ಮತ್ತಿತರರು ಹಾಜರಿದ್ದರು.

Comments
Post a Comment