ಒಳಮೀಸಲಾತಿ ವರದಿ ಅವೈಜ್ಞಾನಿಕ; ಮರು ಸಮೀಕ್ಷೆಗೆ ಬಲಗೈ ಸಮುದಾಯ ಒತ್ತಾಯ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಲಗೈ ಸಮುದಾಯಗಳ ಬೃಹತ್ ಪ್ರತಿಭಟನೆ.

 ಒಳಮೀಸಲಾತಿ ವರದಿ ಅವೈಜ್ಞಾನಿಕ; ಮರು ಸಮೀಕ್ಷೆಗೆ ಬಲಗೈ ಸಮುದಾಯ ಒತ್ತಾಯ.

ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಲಗೈ ಸಮುದಾಯಗಳ ಬೃಹತ್ ಪ್ರತಿಭಟನೆ


   ಬೆಂಗಳೂರು ಮಾರ್ಚ್ 26;  ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕ ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವುದರಿಂದ ಈ ವರದಿಯನ್ನು ತಿರಸ್ಕರಿಸಿ ಮರು ಸಮೀಕ್ಷೆ ನಡೆಸಲು ಬೃಹತ್ ಪ್ರತಿಭಟನಾ ಸಮಾವೇಶವನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಲಾಗಿತು.


ಬಲಗೈ ಸಮುದಾಯಗಳ ಒಕ್ಕೂಟ ಅಧ್ಯಕ್ಷ ಉರಿಲಿಂಗ ಪೆದ್ದಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ,ಸಂಚಾಲಕರಾದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಸಿದ್ಧಯ್ಯ,ವಾಣಿ ಶಿವರಾಂ,ಚಿತ್ರದುರ್ಗದ ಛಲವಾದಿ ಸ್ವಾಮೀಜಿ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು.


ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೂರು ಲಕ್ಷಕ್ಕೂ ಅಧಿಕ ಜಮಾಯಿಸಿದ್ದರು.


 ಒಳಮೀಸಲಾತಿ ಕುರಿತು ನ್ಯಾಯಾಲಯದ ತಡೆಯಾಜ್ಞೆ ಇರುವುದು ಹಾಗೂ ರೋಸ್ಟರ್  ವಿಷಯದಲ್ಲಿ ಉಂಟಾಗಿರುವ ಗೊಂದಲಗಳು ಮತ್ತು ಶೇಕಡ 56ಷ್ಟು ಮೀಸಲಾತಿ ನೀಡುವ ಬಗ್ಗೆ, ಕೇಂದ್ರ ಸರ್ಕಾರ ಒಪ್ಪಿಗೆ ನೀಡುವವರೆಗೂ ಒಳಮೀಸಲಾತಿ ರಹಿತ ಶೇಕಡ 15+3 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಬಲಗೈ ಸಮುದಾಯವು ಸ್ವಾಗತಿಸಲಿದೆ,ಒಳಮೀಸಲಾತಿ 101 ಜಾತಿಗಳಿಗೆ ಸಮಾನವಾಗಿ ಹಂಚಿಕೆಯಾಗುವ ಮೀಸಲಾತಿ ದೃಷ್ಟಿಯಿಂದ ಪ್ರಮಾಣ ಹೆಚ್ಚಾಗಬೇಕಾದ್ದುದ್ದು, ಅನಿವಾರ್ಯವಾಗಿದೆ, ಆದರೆ 101 ಜಾತಿಗಳ ಪೈಕಿ ಒಂದು ಜಾತಿಯ ಒತ್ತಡಕ್ಕೆ ಸರ್ಕಾರ ಮಣಿದು ಶೇಕಡ 15+3ರ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಮುಂದಾದರೆ, ಬಲಗೈ ಸಮುದಾಯಗಳ ಪ್ರತಿರೋಧವನ್ನು ರಾಜ್ಯ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್  ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಬೇಕು,

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆ ವರದಿ ಲಭ್ಯವಾದ ನಂತರ ಅಂಕಿಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್  ಆಯೋಗದ ಅಂಕಿಅಂಶಗಳನ್ನು ಹೋಲಿಕೆ ಮಾಡುವುದು, ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು 

ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು,

ಸಮಾಜ ಕಲ್ಯಾಣ ಇಲಾಖೆ  ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ-ಎಬಿಸಿ ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸಬೇಕು,

ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಎಂದರು

ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರ ಸೌಲಭ್ಯ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು, ಚಿತ್ರದುರ್ಗ ಜಿಲ್ಲೆಯಲ್ಲಿ ಹೊಲಯ ಸಮುದಾಯ 223 ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿಯಲ್ಲಿ ದಾಖಲಿಸಿರುವುದನ್ನು ಮರು ಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕು ಎಂದು ಆಯೋಗದ ವರದಿ ವಿರುದ್ಧ ಕಿಡಿಕಾರಿದರು.


ಸ್ಥಳಕ್ಕೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ ಕರ್, ಎಂ.ಬಿ.ಪಾಟೀಲ್ ಮನವಿ ಸ್ವೀಕರಿಸಿ ಮುಖ್ಯಮಂತ್ರಿ ಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.


ರಾಜ್ಯ ಸಂಚಾಲಕರಾದ ಬಿ.ಎಸ್. ರಮೇಶ್ ಸೇರಿದಂತೆ ಅನೇಕರು ಹಾಜರಿದ್ದರು.


ಬಾಕ್ಸ್ ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ ಮೂಲಕ ರಾಷ್ಟ್ರೀಯ ಜನಗಣತಿ, ಸಮಾಜಿಕ,ಆರ್ಥಿಕ ಸಮೀಕ್ಷಾ ವರದಿ ಬರುವವರೆಗೂ ಬಲಗೈ ಸಂಬಂಧಿತ ಸಮುದಾಯಗಳಿಗೆ ಯಾವುದೇ ಅನ್ಯಾಯ ಮಾಡುವುದಿಲ್ಲ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಮೊಟಕುಗೊಳಿಸಲಾಯಿತು.

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"