ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಕೇಂದ್ರ ಸರ್ಕಾರ ನೇರ ಹೊಣೆ-ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ*

 *ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಕೇಂದ್ರ ಸರ್ಕಾರ ನೇರ ಹೊಣೆ-ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ*


*ಲಕ್ಷಾಂತರ ನೀಟ್ ವಿದ್ಯಾರ್ಥಿಗಳ ಬಾಳಿನಲ್ಲಿ ಚಲ್ಲಾಟ, ಮಾನಸಿಕವಾಗಿ ಕುಗ್ಗಿ ಹೋದ ವಿದ್ಯಾರ್ಥಿಗಳು-ಮಂಜುನಾಥ್ ಹೆಚ್.ಎಸ್.*


ಬೆಂಗಳೂರು: ಫೀಡಂ ಪಾರ್ಕ್ ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿವತಿಯಿಂದ ನೀಟ್ (NEET)ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಲಿದೆ, ಪ್ರಶ್ನೆ ಪತ್ರಿಕೆ ಬಹಿರಂಗದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರಧಾನಿ ನರೇಂದ್ರಮೋದಿರವರ ಆಡಳಿತದಲ್ಲಿನ ಪರೀಕ್ಷೆ ವ್ಯವಸ್ಥೆ ಮತ್ತು ಭ್ರಷ್ಟಚಾರದ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮಂಜುನಾಥ್ ಹೆಚ್.ಎಸ್.ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ.

*ಹೆಚ್.ಎಸ್.ಮಂಜುನಾಥ್ ರವರು* ಮಾತನಾಡಿ ಬಿಜೆಪಿ ಸರ್ಕಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸತತವಾಗಿ ಹಗರಣ ನಡೆಯುತ್ತಿದೆ. 2024ರಲ್ಲಿ 2026ರಲ್ಲಿ ಪ್ರಕರಣ ನಡೆದಿದೆ.

ಲಕ್ಷಾಂತರ ಬಡ ಮಕ್ಕಳು ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ. ಓದಿ ಪಾಸಾಗುವ ವಿದ್ಯಾರ್ಥಿಗಳಿಗೆ ಇಂದು ಭವಿಷ್ಯವಿಲ್ಲ. ಕಾಪಿ ಹೊಡೆದು ಪಾಸಾಗುವ ಶ್ರೀಮಂತ ಕುಟುಂಬದ ಮಕ್ಕಳು ವೈದ್ಯರಾಗುತ್ತಾರೆ.

ಹಲವಾರು ತಿಂಗಳು ಕಾಲ ಫೀಸು ಕಟ್ಟಿ ನೀಟ್ ಪರೀಕ್ಷೆ ತಯಾರುಗುವ ವಿದ್ಯಾರ್ಥಿಗಳು ಮರು ಪರೀಕ್ಷೆಯಿಂದ ಮತ್ತೇ ತಯಾರಿಗೆ ಹಣ ಖರ್ಚುಗುತ್ತದೆ. ಬಡವರು, ರೈತರ ಸಂಕಷ್ಟಗಳು ಕೇಂದ್ರ ಸರ್ಕಾರ ಗಮನಹರಿಸುವುದಿಲ್ಲ.

22ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ ಮತ್ತೇ ಮರು ಪರೀಕ್ಷೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಶಿಕ್ಷಣ ಕುರಿತು ಅರಿವು ಇಲ್ಲದ ಪ್ರಧಾನಿ ನರೇಂದ್ರಮೋದಿರವರಿಗೆ ಮಕ್ಕಳ ಭವಿಷ್ಯ ಜೊತೆಯಲ್ಲಿ ಕೇಂದ್ರ ಸರ್ಕಾರ ಚಲ್ಲಾಟವಾಡುತ್ತಿದೆ.

ಕೇಂದ್ರ ಬಿಜೆಪಿ ಸರ್ಕಾರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿ.ಎಸ್.ಐ.ನೇಮಕಾತಿ ಪರೀಕ್ಷೆ ಪತ್ರಿಕೆ ಸೋರಿಕೆಯಾಗಿತ್ತು. ಬಿಜೆಪಿ ಸರ್ಕಾರಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ರೂವಾರಿಗಳು.

ಕೇಂದ್ರ ಸರ್ಕಾರ ಪ್ರತಿವರ್ಷ 2 ಕೋಟಿ ಉದ್ಯೋಗ ನೀಡಿಲ್ಲ ಅದರೆ ನಮ್ಮ ಸರ್ಕಾರದ ಕುರಿತು ಪ್ರಶ್ನೆ ಮಾಡುತ್ತಾರೆ ಬಿಜೆಪಿ ಪಕ್ಷದವರಿಗೆ ಯಾವ ನೈತಿಕತೆ ಇದೆ.

ಪೇಪರ್ ಸೋರಿಕೆ ಮಾಫಿಯ ಕಡಿವಾಣ ಹಾಕಬೇಕು ಮತ್ತು ಈ ಹಿಂದಿನ ಶಕ್ತಿಗಳನ್ನು ಬಂಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ