ಪರಮೇಶ್ವರ್ ಸಿಎಂ ಮಾಡುವಂತೆ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯ

 ಪರಮೇಶ್ವರ್ ಸಿಎಂ ಮಾಡುವಂತೆ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯ

ಬೆಂಗಳೂರು: ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಿರಿಯರೊಬ್ಬರಿಗೆ ಇದೀಗ ಮುಖ್ಯಮಂತ್ರಿ ಪಟ್ಟ ನೀಡಬೇಕು ಇಲ್ಲವಾದರೆ ದಲಿತ ಸಂಘಟನೆಗಳ ವತಿಯಿಂದ ಭಾರಿ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು

ದಲಿತ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಗುರುವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ  ಸುರೇಶ್ ರಾಜ್, ಸ್ವತಂತ್ರ ಭಾರತಕ್ಕೆ 80 ವರ್ಷ ತುಂಬುತ್ತಿದೆ. ಆಳುವ ಪಕ್ಷಗಳು ದಲಿತ ಜನಾಂಗಗಳನ್ನು ಇಂದಿಗೂ ತಮ್ಮ ಅಡಿಯಾಳುಗಳಂತೆ ಅತಂತ್ರ ಸ್ಥಿತಿಯಲ್ಲೇ ನಡೆಸಿಕೊಳ್ಳುತ್ತಿರುವ ದಲಿತ ದ್ರೋಹದ ನಡೆಯನ್ನು ನಾವು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವು ಇದಕ್ಕೆ ಹೊರತಾಗಿಲ್ಲ ಎನ್ನುವುದಕ್ಕೆ ಇದೀಗ ರಾಜ್ಯದಲ್ಲಿ ಉದ್ಭವವಾಗಿರುವ ರಾಜಕೀಯ ಬೆಳವಣಿಗೆಯಾಗಿದೆ, ಪ್ರಸ್ತುತ ರಾಜಕೀಯ ಬಿಕ್ಕಟ್ಟಿನಲ್ಲಿ ದಲಿತ ಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವುದು ಖಂಡನೀಯ. ಕಾಂಗ್ರೆಸ್ ಪಕ್ಷದ ವರಿಷ್ಠ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಾದರೂ ದಲಿತರೊಬ್ಬರನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಮಾಡಲಾಗಲಿಲ್ಲವೆಂದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ಯಾವ ಮುಖವನ್ನು ತೋರಿಸಿ ದಲಿತರ ಮತಗಳನ್ನು ಯಾಚಿಸಬೇಕು ಎನ್ನುವುದನ್ನು ಯೋಚಿಸಬೇಕು ಎಂದು ಹೇಳಿದರು.

ಸಿದ್ದರಾಮಯ್ಯನವರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಇದೀಗ ರಾಜಿನಾಮೆ ಕೊಡಿಸಿರುವ ರಾಜಕೀಯ ಷಡ್ಯಂತ್ರದ ಹಿನ್ನೆಲೆಯಲ್ಲಿ ಹಿಂದೆ ದಲಿತರೊಬ್ಬರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಬೇಕಿದ್ದ ಕಾಂಗ್ರೆಸ್ ಪಕ್ಷ ಇದೀಗ ಖಾಲಿಯಾಗುತ್ತಿರುವ

ಮುಖ್ಯಮಂತ್ರಿ ಹುದ್ದೆಗೆ ದಲಿತ ಹಿರಿಯ ಮುಖಂಡರೊಬ್ಬರ ಹೆಸರನ್ನು ತನ್ನ ಸಿ.ಎಲ್.ಪಿ.ಸಭೆಯಲ್ಲಿ ಸೂಚಿಸಿ ಕಳೆದ 80 ವರ್ಷಗಳಿಂದ ತಮ್ಮ ತೆಕ್ಕೆಯಲ್ಲಿರುವ ಕೊಟ್ಯಾಂತರ ದಲಿತರ ಋಣವನ್ನು ತೀರಿಸುವ ಒಂದು ಮಹತ್ತರ ರಾಜಕೀಯ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆರ್.ಪಿಐ ಪಕ್ಷ ರಾಷ್ಟೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ದಲಿತರು ಕಾಂಗ್ರೆಸ್ ವಿರುದ್ಧ ದಂಗೆ ಏಳುವ ಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಲಾಗುವುದು, ಹಾಗಾದಾಗ ಹತ್ತಿರದಲ್ಲೇ ಬರುತ್ತಿರುವ ಸ್ಥಳೀಯ ಸಂಸ್ಥೆಗಳ, ತಾಲ್ಲೂಕು-ಜಿಲ್ಲಾ ಪಂಚಾಯ್ತಿ ಚುನಾವಣೆ, 2028 ರ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟ ಆಗುವುದರಲ್ಲಿ ಯಾವ ಅನುಮಾನವು ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈಗಲಾದರೂ ಕಾಂಗ್ರೆಸ್ ಪಕ್ಷದ ಎಲ್ಲಾ ದಲಿತ ಶಾಸಕರು ಒಂದಾಗಿ ತಮ್ಮ ಮೌನವನ್ನು  ಮುರಿದು,ಅಡಿಯಾಳುತನವನ್ನು ತಿರಸ್ಕರಿಸಿ ದಲಿತ ಮುಖ್ಯಮಂತ್ರಿ   ಸ್ಥಾನಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಯ ನಡೆಸಬೇಕು ಎಂದು ಒತ್ತಾಯಿಸಿದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ