ಕೆ. ವಿ.ಅಮರ್‌ನಾಥ್‌ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಮಡಿವಾಳರ ಆಗ್ರಹ.

 ಕೆ. ವಿ.ಅಮರ್‌ನಾಥ್‌ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಮಡಿವಾಳರ ಆಗ್ರಹ.




ಬೆಂಗಳೂರು ಜೂನ್ 6; ಮಡಿವಾಳ ಸಮುದಾಯದ ಪ್ರಮುಖರಾದ ಶ ಕೆ. ವಿ. ಅಮರನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡುವಂತೆ ರಾಜ್ಯ ಮಡಿವಾಳರ ಸಂಘ ಆಗ್ರಹಿಸಿದೆ.

 ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಿ.ನಂಜಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಆರ್.ಪ್ರಕಾಶ್, ಉಪಾಧ್ಯಕ್ಷ ರಾಜಣ್ಣ,ಮಡಿವಾಳ ಸಮುದಾಯದ ಸಮಾಜದ ಸೇವೆ ಮಾಡುತ್ತಾ ಮತ್ತು ಸಮಾಜದ ಅನೇಕ ಸಮಾವೇಶಗಳಿಗೆ ಆರ್ಥಿಕ ಸಹಾಯ, ಸಂಘಟನೆ ಮಾಡುತ್ತಾ ಬಂದಿದ್ದಾರೆ. ಕೆ. ವಿ. ಅಮರ್‌ನಾಥ್ ಅವರು ಮಡಿವಾಳ ಸಮುದಾಯದ ಯಾವುದೇ ಸಮಸ್ಯೆಗೂ ಸ್ಪಂದಿಸಿ ನೆರವಾಗುವ ಮೂಲಕ ಸಮುದಾಯದ ಮುಂಚೂಣಿಯ ನಾಯಕರಾಗಿದ್ದಾರೆ. ಸಮಾಜ ಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಕ್ಷೇತ್ರಕ್ಕೆ ಬಂದು ಇವರು ಕಾಂಗ್ರೆಸ್ ಪಕ್ಷವನ್ನು ಸೇರಿ ಪಕ್ಷವನ್ನು ಸಂಘಟನೆ ಮಾಡಿ ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಮಡಿವಾಳರ ಬೃಹತ್ ಜನ ಜಾಗೃತಿ ಸಮಾವೇಶವನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮಾಡಿಸಿದರು ಎಂದರು.


ಸಮಾಜ ಸೇವೆ ಎನ್ನುವುದು ಕೆ. ವಿ. ಅಮರ್‌ನಾಥ್ ರವರ ರಕ್ತದಲ್ಲಿ ಬೆರೆತು ಹೋಗಿದೆ. ನೊಂದು ಬಂದವರನ್ನು ಯಾವತ್ತು ಬರಿಗೈಯಲ್ಲಿ ಕಳಿಸಿದವರಲ್ಲ. ಹಾಗೆಯೇ ಬದುಕಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಸಹಾಯ ಮಾಡಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಸಮುದಾಯ ಭವನಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಮಡಿವಾಳ ಸಮುದಾಯದ ಪ್ರಮುಖರಾಗಿ ರಾಜಕೀಯ ದುರೀಣರಾಗಿ ಕಾಂಗ್ರೆಸ್ ಪಕ್ಷದ ಪ್ರಚಾರಕರಾಗಿ ಕೆಲಸ ನಿರ್ವಹಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿರುವ ಅವಧಿಯ ಸಮಾವೇಶದಲ್ಲಿ 'ರಾಜಕೀಯವಾಗಿ ನೀವುಗಳು ಹಿಂದುಳಿದಿದ್ದು ನಿಮಗೆ ರಾಜಕೀಯ ಶಕ್ತಿ ತುಂಬುತ್ತೇನೆ' ಎಂದು ಆಶ್ವಾಸನೆ ನೀಡಿದ ಮಡಿವಾಳ ಸಮಾಜವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ

ಹಿಂದುಳಿದ ಸಮಾಜವಾಗಿದ್ದು ಎಲ್ಲಾ 30 ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು ಹಾಗೂ ರಾಜ್ಯ ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಕರ್ನಾಟಕ ರಾಜ್ಯದ ಮಡಿವಾಳ ಸಮುದಾಯದ ಒಕ್ಕೊರಲಿನಿಂದ ಕೆ. ವಿ. ಅಮ‌ರನಾಥ್‌ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ