ಹಕ್ಕುಗಳ ಜೊತೆಗೆ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು: ಎಂ.ಎಸ್ ಸಂತೋಷ್

ಹಕ್ಕುಗಳ ಜೊತೆಗೆ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು: ಎಂ.ಎಸ್ ಸಂತೋಷ್

ಬೆಂಗಳೂರು: ದೇಶಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯ ವಾತಾವರಣ ನೆಲೆಸಿದ್ದು, ನಾವು 79 ವರ್ಷಗಳನ್ನು ಪೂರೈಸಿ 80ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಪಾದಾರ್ಪಣೆ ಮಾಡುತ್ತಿದ್ದೇವೆ. ಈ ಶುಭ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕನೂ ತನ್ನ ಹಕ್ಕುಗಳ ಜೊತೆಗೆ ಜವಾಬ್ದಾರಿಗಳನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ಜೈನ್ ವಿಶ್ವವಿದ್ಯಾಲಯದ ಜಂಟಿ ರಿಜಿಸ್ಟ್ರಾರ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕದ ಕಮಿಷನರ್ ಎಂ.ಎಸ್ ಸಂತೋಷ್ ಅಭಿಪ್ರಾಯಪಟ್ಟರು.


ಶನಿವಾರ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ವತಿಯಿಂದ ಸ್ವಾತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯವನ್ನು ಅನುಭವಿಸುವ ರೀತಿಯಲ್ಲಿಯೇ ದೇಶಕ್ಕೆ ಒಳಿತಾಗುವಂತಹ ಜವಾಬ್ದಾರಿಯುತ ನಡೆಗಳನ್ನು ಅನುಸರಿಸಬೇಕು. ಈ ನಿಟ್ಟಿನಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ಎನ್.ಸಿ.ಸಿ ಯಂತಹ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಕೊಳ್ಳುವುದರಿಂದ ಅವರಲ್ಲಿ ಸದ್ಗುಣಗಳು ಮತ್ತು ವ್ಯಕ್ತಿತ್ವ ವಿಕಸನವಾಗುತ್ತದೆ. ಅವರನ್ನು ದೇಶದ ಸದೃಢ ಪ್ರಜೆಗಳನ್ನಾಗಿ ರೂಪಿಸಲು ನೆರವಾಗುತ್ತದೆ ಎಂದರು.


ಇಲ್ಲಿ ಒಬ್ಬ ವಿದ್ಯಾರ್ಥಿನಿ ದೇಶವನ್ನು ಸ್ವಚ್ಛವಾಗಿಡಲು ಪ್ರಧಾನಿಯಾಗುವ ಆಸೆ ವ್ಯಕ್ತಪಡಿಸಿದ್ದನ್ನು ನೋಡಿ ಸಂತಸವಾಯಿತು. ಆದರೆ ದುರದೃಷ್ಟವಶಾತ್ ಅನೇಕ ಹಿರಿಯರಲ್ಲಿ ಈ ರೀತಿಯ ನಾಗರಿಕ ಕರ್ತವ್ಯ ಪ್ರಜ್ಞೆಯ ಕೊರತೆಯಿದೆ. ಸಮಾಜ ಮತ್ತು ದೇಶದ ಏಳಿಗೆಗಾಗಿ ಪ್ರತಿಯೊಬ್ಬರೂ ತಮ್ಮಲ್ಲಿ ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಮಾತನಾಡಿ, ಸಂಸ್ಥೆಯ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್. ಸಿಂಧ್ಯ ಅವರ ನಾಯಕತ್ವದಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯು ಲಕ್ಷಾಂತರ ಮಕ್ಕಳಿಗೆ ಶಿಸ್ತು, ಸಮಾಜ ಸೇವೆ ಹಾಗೂ ನಾಯಕತ್ವದ ಮೌಲ್ಯಗಳನ್ನು ಧಾರೆ ಎರೆಯುತ್ತಿದೆ. ಈ ಸಂಸ್ಥೆಯ ವಿಚಾರಧಾರೆಯಡಿ ಬೆಳೆಯುತ್ತಿರುವ ಮಕ್ಕಳು ದೇಶದ ಉತ್ತಮ ಪ್ರಜೆಗಳಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ