ವಿದ್ಯಾರ್ಥಿಗಳಿಗೆ ಶಿಸ್ತು ಬೆಳೆಸುವಲ್ಲಿ ಸ್ಕೌಟ್ಸ್- ಗೈಡ್ಸ್ ಸಂಸ್ಥೆಯ ಪಾತ್ರ ಅನನ್ಯ: ರಾಮಲಿಂಗಾರೆಡ್ಡಿ
- Get link
- X
- Other Apps
ವಿದ್ಯಾರ್ಥಿಗಳಿಗೆ ಶಿಸ್ತು ಬೆಳೆಸುವಲ್ಲಿ ಸ್ಕೌಟ್ಸ್- ಗೈಡ್ಸ್ ಸಂಸ್ಥೆಯ ಪಾತ್ರ ಅನನ್ಯ: ರಾಮಲಿಂಗಾರೆಡ್ಡ
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ ಹಾಗೂ
ಉತ್ತಮ ಮನಸ್ಥಿತಿ ಬೆಳೆಸುವಲ್ಲಿ ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕ್ರೀಡಾ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಶನಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಓದಿಗೆ ಸೀಮಿತವಾಗಬಾರದು. ಓದಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದರಿಂದ ಶಿಸ್ತು, ಸಮಯಪಾಲನೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
- Get link
- X
- Other Apps

Comments
Post a Comment