ಕೆಪಿಎಸ್ಸಿ ವಿರುದ್ಧದ ತನಿಖೆ ಪೂರ್ಣಗೊಳ್ಳುವವರೆಗೆ ಕೆಎಎಸ್ ಪರೀಕ್ಷೆ ಮುಂದೂಡಲು ಆಗ್ರಹ
ಕೆಪಿಎಸ್ಸಿ ವಿರುದ್ಧದ ತನಿಖೆ ಪೂರ್ಣಗೊಳ್ಳುವವರೆಗೆ ಕೆಎಎಸ್ ಪರೀಕ್ಷೆ ಮುಂದೂಡಲು ಆಗ್ರಹ 319 ಕೆಎಎಸ್ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಖಚಿತಪಡಿಸಲು ಒತ್ತಾಯ; ವಿಧಾನಸಭಾ ಸಮಿತಿ ವರದಿ ಜಾರಿಗೆ ತರಲು ಮನವಿ ಬೆಂಗಳೂರು, ನವೆಂಬರ್ 4: ಕರ್ನಾಟಕ ಲೋಕಸೇವಾ ಆಯೋಗದ (KPSC) ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ನೇಮಕಾತಿ ಅಕ್ರಮಗಳ ಆರೋಪಗಳ ಕುರಿತು ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತಿರುವ ತನಿಖೆ ಪೂರ್ಣಗೊಳ್ಳುವವರೆಗೆ 319 ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಪದವೀಧರರ ಸಂಘ (ರಿ.) ಒತ್ತಾಯಿಸಿದೆ. 2026-27ನೇ ಸಾಲಿನ 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಜುಲೈ 31ರಂದು ಅಧಿಸೂಚನೆ ಹೊರಡಿಸಿದ್ದು, ನವೆಂಬರ್ 15ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಆದರೆ, ಹಿಂದಿನ ನೇಮಕಾತಿ ಪ್ರಕ್ರಿಯೆಗಳಲ್ಲಿ ಕಂಡುಬಂದಿರುವ ಲೋಪಗಳು ಹಾಗೂ ಪ್ರಸ್ತುತ ತನಿಖೆಗಳನ್ನು ಪರಿಗಣಿಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಸಂಘ ಮನವಿ ಮಾಡಿದೆ. 2017-18ರ ನಂತರ ಕೆಎಎಸ್ ನೇಮಕಾತಿಯಲ್ಲಿ ಹಲವು ವರ್ಷಗಳ ವಿಳಂಬವಾಗಿದೆ. 2023-24ನೇ ಸಾಲಿನ 384 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯೂ ಮೀಸಲಾತಿ ಮತ್ತು ಇತರ ಕಾನೂನು ಸಂಬಂಧಿತ ವಿವಾದಗಳಿಂದ ನ್ಯಾಯಾಲಯದ ವಿಚಾರಣೆಯಲ್ಲಿದೆ. ಹೀಗಾಗಿ ಹೊಸ ನೇಮಕಾತಿಯೂ ಕ...