JD(S) :ಲಕ್ಷ ಕಾರ್ಯಕರ್ತರ ಜತೆ ಏಕಕಾಲಕ್ಕೆ ಕಾನ್ಫರೆನ್ಸ್ ಕಾಲ್
JD(S) :ಲಕ್ಷ ಕಾರ್ಯಕರ್ತರ ಜತೆ ಏಕಕಾಲಕ್ಕೆ ಕಾನ್ಫರೆನ್ಸ್ ಏಕಕಾಲಕ್ಕೆ ಕಾನ್ಫರೆನ್ಸ್ ಕಾಲ್ ಮೂಲಕ ಇಂದು ಕಾರ್ಯಕರ್ತರ ಜತೆ ಮಾಜಿ ಮುಖ್ಯಮಂತ್ರಿ ಚರ್ಚೆ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಸಾಮೂಹಿಕ ಫೋನ್ ಕರೆ ರಾಜ್ಯದಲ್ಲಿ ಇಂಥ ಪ್ರಯೋಗ ಇದೇ ಮೊದಲು ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ. ಸ್ವತಃ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಮಾಜಿ ಮುಖ್ಯಮಂತ್ರಿಗಳು, ನಾಳೆ ಬೆಳಗ್ಗೆ 11ರಿಂದ 12 ಗಂಟೆಗೆ ಬೆಂಗಳೂರಿನಲ್ಲಿ ಕಾರ್ಯಕರ್ತರ ಜತೆ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡುವುದಾಗಿ ಹೇಳಿದರು. ನಾನು ಮಾತನಾಡಲಿರುವ ಎಲ್ಲರೂ ಬೂತ್ ಮಟ್ಟದ ಕಾರ್ಯಕರ್ತರಾಗಿದ್ದು, ಪಂಚರತ್ನ ರಥಯಾತ್ರೆ ಕಾರಣದಿಂದ ಎಲ್ಲರನ್ನೂ ವೈಯಕ್ತಿಕವಾಗಿ ಭೇಟಿ ಮಾಡಲು ಆಗುತ್ತಿಲ್ಲ. ಹೀಗಾಗಿ ಮೊಬೈಲ್ ಮೂಲಕ ಎಲ್ಲರನ್ನೂ ಸಂಪರ್ಕಿಸುವ ಕೆಲಸ ಮಾಡುತ್ತಿದ್ದೇನೆ ಎಂದರು. ಈಗಾಗಲೇ ಪಂಚರತ್ನ ರಥಯಾತ್ರೆ ಮೂಲಕ 67 ದಿನಗಳಲ್ಲಿ ರಾಜ್ಯದ 65 ಕ್ಷೇತ್ರಗಳನ್ನು ಕ್ರಮಿಸಿದ್ದೇನೆ. ಪ್ರತಿ ಕ್ಷೇತ್ರದಲ್ಲಿಯೂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ನೇರವಾಗಿ ಸಂಪರ್ಕ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಆವರ ಸವಾಲುಗಳಿಗೆ ಪರಿಹಾರವನ್ನೂ ಸೂಚ...